ಮೈಸೂರು, : “370 ಕಾಯ್ದೆ ರದ್ದತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಹಾಕಿದ್ದೇವೆ. ಬಿಜೆಪಿಯ ನಮ್ಮ ಮುಂದಿನ ಗುರಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ” ಎಂದಿದ್ದಾರೆ ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸುವ ಮೂಲಕ ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ. ಬಿಜೆಪಿ ವಿಚಾರಧಾರೆಗಳ ಬಗ್ಗೆ ಜನರಲ್ಲಿ ನಂಬಿಕೆ ಹಾಗೂ ವಿಶ್ವಾಸ ಬಂದಿದೆ.
ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಹಾಗೂ ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ನನ್ನ ಗುರಿ. ಈ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ” ಎಂದರು. ”
ರಾಜ್ಯ ಮತ್ತು ಕೇಂದ್ರದಲ್ಲಿ ಪಕ್ಷ ಅಧಿಕಾರದಲ್ಲಿರುವ ವಿಶಿಷ್ಟ ಸಂದರ್ಭದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿದ್ದೇನೆ. ಈ ಸಂದರ್ಭವನ್ನು ಉಪಯೋಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸವಾಲು ನನ್ನ ಮೇಲಿದೆ. ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಪಕ್ಷ ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಬೇಕಾಗಿದೆ.
ಪಕ್ಷದ ಕಾರ್ಯಕರ್ತರ ಶ್ರಮದಿಂದ ಚುನಾವಣೆ ಗೆಲ್ಲಲು ಗಮನ ಹರಿಸಲಾಗುವುದು. ಮೈಸೂರಲ್ಲಿ ಕ್ರಿಯಾಶೀಲರಾದ ಪ್ರತಾಪಸಿಂಹ ಇದ್ದಾರೆ. ಯಾವುದೇ ಸಂದರ್ಭದಲ್ಲಿ ಪ್ರಧಾನಿ ಬಳಿ ಹೋಗಿ ಮಾತನಾಡುವ ಸಾಮರ್ಥ್ಯ ಅವರಲ್ಲಿದೆ” ಎಂದು ಹೊಗಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…