ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ : ರಾಹುಲ್ ಗಾಂಧಿ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ ,ಇಸ್ರೋ ವಿಜ್ಞಾನಿಗಳ ಕೆಲಸ ವ್ಯರ್ಥವಾಗಿಲ್ಲ ಎಂದು ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಕಳೆದುಕೊಂಡ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭಾರತ ಹೆಮ್ಮೆಯ ಸಂಸ್ಥೆ ಇಸ್ರೋ ಕೈಗೊಂಡಿದ್ದ ಚಂದ್ರಯಾನ -2 ಯೋಜನೆ ಬಹುತೇಕ ಯಶಸ್ವಿಯಾಗಿ ನಡೆದಿದ್ದು, ಆದರೆ ಅಂತಿಮ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಸಂಪರ್ಕ ಕಡಿತಗೊಂಡಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ ಎಂದು ಹೇಳಿದ್ದಾರೆ.

ಚಂದ್ರಯಾನ-2 ಮೂನ್ ಮಿಷನ್‍ನಲ್ಲಿ ಇಸ್ರೋ ತಂಡವು ಮಾಡಿದ ಅದ್ಭುತ ಕಾರ್ಯಕ್ಕಾಗಿ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ನಿಮ್ಮ ಈ ಸಾಧನೆ ಭಾರತೀಯ ವೈಜ್ಞಾನಿಕ ಹಾದಿಗೆ ಮತ್ತು ಮುಂದಿನ ಭಾರತ ಕಾರ್ಯಚರಣೆಗೆ ಅಡಿಪಾಯವನ್ನು ಹಾಕಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಈ ವಿಚಾರದ ಬಗ್ಗೆ ಕಾಂಗ್ರೆಸ್ ಪಕ್ಷವು ಕೂಡ ಟ್ವೀಟ್ ಮಾಡಿದ್ದು, ಈ ಉದ್ವಿಗ್ನ ಸಮಯದಲ್ಲಿ ರಾಷ್ಟ್ರವು ಇಸ್ರೋದ ಸಂಪೂರ್ಣ ತಂಡ ಜೊತೆ ನಿಂತಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆಯು ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಜೈ ಹಿಂದ್ ಎಂದು ಟ್ವೀಟ್ ಮಾಡಿದೆ.