ಕಾಂತಾರ ಚಾಪ್ಟರ್ 1 ಸಕ್ಸಸ್ ಬೆನ್ನಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಡಿಕೆಶಿ, ರಿಷಬ್ ಜೊತೆಗಿನ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಇಂದು (ನ.19) ನನ್ನ ಗೃಹಕಚೇರಿಯಲ್ಲಿ ಖ್ಯಾತ ನಟ ರಿಷಬ್ ಶೆಟ್ಟಿಯವರು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಈ ವೇಳೆ ಕಾಂತಾರ: ಒಂದು ದಂತಕಥೆ – ಅಧ್ಯಾಯ 1ರ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ. ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಅವರು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.
ಡಿಕೆಶಿ ಅವರನ್ನು ರಿಷಬ್ ಶೆಟ್ಟಿ ಭೇಟಿಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭೇಟಿಯಾಗಿರುವುದಕ್ಕೆ ನಿಖರ ಕಾರಣದ ಬಗ್ಗೆ ರಿಷಬ್ ಎಲ್ಲಿಯೂ ಹೇಳಿಕೊಂಡಿಲ್ಲ.
ಸದ್ಯ ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಕಂಡಿದ್ದು, ಸುಮಾರು 850 ಕೋಟಿ ರೂ.ಗೂ ಅಧಿಕ ಹಣವನ್ನು ಗಳಿಸಿದೆ. ಕೆಜಿಎಫ್ 2 ನಂತರ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಖ್ಯಾತಿಯನ್ನು ಗಿಟ್ಟಿಸಿಕೊಂಡಿದೆ. ಅಲ್ಲದೆ, 2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…