ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯಿಂದಾಗಿ ಚರ್ಮ ಉದ್ಯಮಕ್ಕೆ ಈ ಕಾಯ್ದೆಯಿಂದ ಹೊಡೆತ ಬೀಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಚರ್ಮ ಉದ್ಯಮ ಈ ಕಾಯ್ದೆಯಿಂದ ಮುಚ್ಚಿ ಹೋಗುವ ಆತಂಕ ಇದೆ. ಈ ಬಗ್ಗೆ ಅಧ್ಯಯನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಜನ ವಿರೋಧಿ ಕಾಯ್ದೆ, ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ನಾಡಿನ ಜನತೆಗೆ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಪರಿಣಾಮಗಳ ಬಗ್ಗೆ ಗ್ರಾಮ ಪಂಚಾಯತಿ ಚುನಾವಣೆ ಮುಗಿದ ಬಳಿಕ ಜಾಗೃತಿ ಅಭಿಯಾನ ರಾಜ್ಯಾದ್ಯಂತ ಮಾಡಲಾಗುವುದು.
ರಾಜ್ಯದ ಎಲ್ಲ ವರ್ಗದ ಜನರಿಗೆ ಜಾಗೃತಿ ಮೂಡಿಸಲು ಪ್ರತಿ ತಾಲೂಕಿನಲ್ಲಿ ಅಭಿಯಾನ ಕೈಗೊಳ್ಳಲಾಗುವುದು. ಜಾನುವಾರು ಖರೀದಿ ದರ ಸರ್ಕಾರ ನಿಗದಿ ಮಾಡಿದೆ. ಅದನ್ನು ಕೊಟ್ಟು ಸರ್ಕಾರವೇ ಜಾನುವಾರು ಖರೀದಿ ಮಾಡಲಿ. ಸಚಿವರು, ಶಾಸಕರು ತಮ್ಮ ಮನೆ, ಜಮೀನಿನಲ್ಲಿ ಜಾನುವಾರು ಸಾಕಲಿ ಎಂದು ಟಾಂಗ್ ಕೊಟ್ಟರು.
ಮುಖ್ಯಮಂತ್ರಿ ಬಿಎಸ್‌ವೈ ಸರಕಾರದ ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲೂ ಈ ಕಾಯ್ದೆ ವಿರುದ್ಧ ತೀವ್ರ ಹೋರಾಟ ನಡೆಸಿದೆ. ವಿಧಾನಸಭೆಯ ಚರ್ಚೆಯ ಬಳಿಕ ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…