ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು : ಕಾರ್ಕಳ ಶಾಸಕ ಸುನಿಲ್ ಕುಮಾರ್‌ – vishwanews24

Featured, ಉಡುಪಿ, ರಾಜ್ಯ ನ್ಯೂಸ್

ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ ..

ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆ ಸ್ತಬ್ದವಾಗಿತ್ತು , ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಗೆ ಸ್ವಾಗತ : ಸುನಿಲ್ ಕುಮಾರ್‌

ಬೆಂಗಳೂರು: ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್  ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿದೆ. ನಗರ ನಕ್ಸಲ್‌ಗಳು ಸಹ ಇದ್ದಾರೆ. ಕಾಡಿನಲ್ಲಿ ಕೂತು ಬಂದೂಕು ಹಿಡಿದು ಕಾರ್ಯಚರಣೆ ಮಾಡುವವರು ಇದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು. ಇವರೆಲ್ಲ ಹೊರ ರಾಜ್ಯಗಳಲ್ಲಿ ತಲೆಮರಿಸಿಕೊಂಡಿದ್ದರು. ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ತಮ್ಮ ಚಟುವಟಿಕೆಗಳನ್ನು ಮಾಡಲು ಬಂದಿದ್ದಾರೆ. ನಗರ ನಕ್ಸಲ್‌ಗಳ ಚಟುವಟಿಕೆಗಳನ್ನ ಸರ್ಕಾರ ಗಮನಿಸಬೇಕು. ವಿಶ್ವವಿದ್ಯಾಲಯ, ಸಾಹಿತಿಗಳು ಎಂದು ಹೇಳಿಕೊಳ್ಳುವವರು, ಬುದ್ಧಿ ಜೀವಿಗಳು ಈ ನಕ್ಸಲ್ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಾರೆ ಎಂದರು.

ಉಡುಪಿ : 13 ವರ್ಷಗಳ ನಂತರ ಜಿಲ್ಲೆಯಲ್ಲಿ ಮೊದಲ ಎನ್‌ಕೌಂಟರ್ ; ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ – vishwanews24

ನಕ್ಸಲರ ಮಟ್ಟ ಹಾಕಬೇಕು. ಕ್ಷಮೆ ಕೋರಿ ಬರುವ ವಿಚಾರದಲ್ಲಿ ಸರ್ಕಾರ ಚರ್ಚೆ ಮಾಡಬೇಕು. ನಕ್ಸಲ್ ಚಟುವಟಿಕೆಯನ್ನ ಮತ್ತೆ ನಗರಕ್ಕೆ ಬಂದು ಮುಂದುವರಿಸುವವರಿದ್ದಾರೆ. ಅದರ ಬಗ್ಗೆ ನಿಗಾವಹಿಸಬೇಕು. ನಕ್ಸಲ್ ನಿಗ್ರಹ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ತಿಳಿಸಿದರು.

 

Leave a Reply