ಬೆಂಗಳೂರು: ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿದೆ. ನಗರ ನಕ್ಸಲ್‌ಗಳು ಸಹ ಇದ್ದಾರೆ. ಕಾಡಿನಲ್ಲಿ ಕೂತು ಬಂದೂಕು ಹಿಡಿದು ಕಾರ್ಯಚರಣೆ ಮಾಡುವವರು ಇದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು. ಇವರೆಲ್ಲ ಹೊರ ರಾಜ್ಯಗಳಲ್ಲಿ ತಲೆಮರಿಸಿಕೊಂಡಿದ್ದರು. ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ತಮ್ಮ ಚಟುವಟಿಕೆಗಳನ್ನು ಮಾಡಲು ಬಂದಿದ್ದಾರೆ. ನಗರ ನಕ್ಸಲ್‌ಗಳ ಚಟುವಟಿಕೆಗಳನ್ನ ಸರ್ಕಾರ ಗಮನಿಸಬೇಕು. ವಿಶ್ವವಿದ್ಯಾಲಯ, ಸಾಹಿತಿಗಳು ಎಂದು ಹೇಳಿಕೊಳ್ಳುವವರು, ಬುದ್ಧಿ ಜೀವಿಗಳು ಈ ನಕ್ಸಲ್ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಾರೆ ಎಂದರು.
ನಕ್ಸಲರ ಮಟ್ಟ ಹಾಕಬೇಕು. ಕ್ಷಮೆ ಕೋರಿ ಬರುವ ವಿಚಾರದಲ್ಲಿ ಸರ್ಕಾರ ಚರ್ಚೆ ಮಾಡಬೇಕು. ನಕ್ಸಲ್ ಚಟುವಟಿಕೆಯನ್ನ ಮತ್ತೆ ನಗರಕ್ಕೆ ಬಂದು ಮುಂದುವರಿಸುವವರಿದ್ದಾರೆ. ಅದರ ಬಗ್ಗೆ ನಿಗಾವಹಿಸಬೇಕು. ನಕ್ಸಲ್ ನಿಗ್ರಹ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ತಿಳಿಸಿದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…