Featured

ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ : ಸಿದ್ದರಾಮಯ್ಯ -Vishwanews24

ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: “ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ. ಈ ರೀತಿ ಸುಳ್ಳು ಹೇಳಿ ಜನರೆದುರು ಬೆತ್ತಲೆ ಆಗೋದನ್ನು ತಪ್ಪಿಸಲು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಉಸ್ತುವಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣೆಯ ಬಗ್ಗೆ ತರಬೇತಿಕೊಡುವುದು ಒಳ್ಳೆಯದು” ಎಂದು ಲೇವಡಿ ಮಾಡಿದ್ದಾರೆ.

5 ಕೋಟಿ ಕೊಟ್ಟರೆ ಪ್ರಧಾನಿ ಮೋದಿ ಹತ್ಯೆ ಮಾಡುತ್ತೇನೆ ಎಂದಿದ್ದ ವ್ಯಕ್ತಿ ಇದೀಗ ಪೊಲೀಸರ ಅತಿಥಿ.. -Vishwanews24

“ನಮ್ಮ ಸರ್ಕಾರದ ಕೊನೆ ವರ್ಷ(2017-18) ಪಡೆದಿದ್ದ ಸಾಲ ಕೇವಲ ರೂ.35,000 ಕೋಟಿ. 2020-21ರ ಪ್ರಸಕ್ತ ಹಣಕಾಸು ವರ್ಷದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಸಾಲ ರೂ.90,000 ಕೋಟಿ, ಅಂದರೆ 157% ಹೆಚ್ಚಳ. ಇದಕ್ಕೆ ಮುಖ್ಯ ಕಾರಣ ತೆರಿಗೆ ಪಾಲು ಮತ್ತು ಅನುದಾನದ ಮೊತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಅನ್ಯಾಯ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ : ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ -Vishwanews24

“ಆರ್ಥಿಕ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆಗೆ ಬದ್ದವಾಗಿಯೇ ನಾನು ಆರು ಬಜೆಟ್ ಮಂಡಿಸಿದ್ದೆ. ಈ ಎಲ್ಲ ಬಜೆಟ್ ಗಳಲ್ಲಿ ಹಣಕಾಸು ಕೊರತೆ ಜಿಎಸ್ ಡಿಪಿಯ ಶೇಕಡಾ ಮೂರರ ಮಿತಿಯಲ್ಲಿತ್ತು. ಒಟ್ಟುಸಾಲ ಎಫ್ ಆರ್ ಬಿ ಎಂ ಕಾಯ್ದೆಗೆ ಅನುಗುಣವಾಗಿ ಜಿಎಸ್ ಡಿಪಿಯ ಶೇಕಡಾ 25ರ ಮಿತಿಯಲ್ಲಿತ್ತು” ಎಂದಿದ್ದಾರೆ.

ಮಂಗಳೂರು : ಕಾರು ಹಾಗೂ ಮೀನಿನ ಲಾರಿ ನಡುವೆ ಅಪಘಾತ : ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ರಿಗೆ ಗಾಯ -Vishwanews24

“ಬಿಜೆಪಿ ಆಡಳಿತದಲ್ಲಿ ಒಟ್ಟು ಸಾಲ ಜಿಎಸ್ ಡಿಪಿಯ ಶೇಕಡಾ 33ರಷ್ಟಾಗಿದೆ. ಇದು ಎಫ್‌‌ಆರ್‌‌ಬಿಎಂ ಕಾಯ್ದೆಯ ಉಲ್ಲಂಘನೆ. ಇದರ ಜೊತೆಗೆ ಹಣಕಾಸು ಕೊರತೆ ಶೇಕಡಾ ಮೂರರಿಂದ ಐದಕ್ಕೇರಿದೆ. ಇದು ಆತಂಕಕಾರಿ ಬೆಳವಣಿಗೆ. ಮೊದಲು‌ ಈ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸಿ,‌ ಆ‌ ಮೇಲೆ ನಮ್ಮ ಸರ್ಕಾರದ ತಪ್ಪು ಹುಡುಕಲು ಹೊರಡಿ” ಎಂದು ಹೇಳಿದ್ದಾರೆ

ಉಡುಪಿ :ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ಟೆಂಡರ್ ಪ್ರಕ್ರಿಯೆ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago