Featured

ನಮ್ಮ ಸರ್ಕಾರದ ವಿರುದ್ಧವಾಗಲಿ, ಕೇಂದ್ರದ ವಿರುದ್ಧವಾಗಲಿ ಪ್ರತಿಭಟನೆ ನಡೆಸುವ ನೈತಿಕತೆ ನಿಮಗಿದೆಯೇ : ಕಾಂಗ್ರೆಸ್ ಗೆ ಬಸವರಾಜ್ ಬೊಮ್ಮಾಯಿ -Vishwanews24

ಬೆಂಗಳೂರು:ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಗೆ ಯಾವುದೇ ರೀತಿಯ ಮಹತ್ವ ಬೇಕಾಗಿಲ್ಲ. ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ನಡೆಸುತ್ತಿರುವ ಪ್ರತಿಭಟನೆ ಇದಾಗಿದೆ. ಇದಕ್ಕೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾ ತನಾಡಿದ ಅವರು, ಕಾಂಗ್ರೆಸ್ ನಾಯಕರು ಯಾವ ಕಾರಣಕ್ಕೆ ಪ್ರತಿಭಟನೆ ಮಾಡುತ್ತಾರೆಂಬುದೇ ಗೊತ್ತಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಿಗೆ ಇವರು ಎಷ್ಟು ಬಾರಿ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿ ನಂತರ ಪ್ರತಿಭಟನೆ ಮಾಡಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ನಾಯಕರಿಗೆ ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಮೊದಲು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಮಾತನಾಡಲಿ ಎಂದು  ತಿರುಗೇಟು ನೀಡಿದ್ದಾರೆ.

ನೀವು ಪ್ರಶ್ನೆ ಮಾಡುವುದಿದ್ದರೆ ನಿಮ್ಮ ಹೈಕಮಾಂಡ್ ನಾಯಕರನ್ನು ಪ್ರಶ್ನೆ ಮಾಡಿ. ನಮ್ಮ ಸರ್ಕಾರದ ವಿರುದ್ಧವಾಗಲಿ, ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ನಿಮಗಿದೆಯೇ ಎಂದು ಪ್ರಶ್ನಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಸರ್ಕಾರ ತುರ್ತು ಪರಿಹಾರ ಕೈಗೊಂಡಿದೆ. ಸಂತ್ರಸ್ತರ ಖಾತೆಗೆ 10 ಸಾವಿರ ನಗದು ಜಮೆ ಮಾಡಿದ್ದೇವೆ.

ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ , ಮನೆ ನಿರ್ಮಾಣ, ದುರಸ್ತಿ ಕಾರ್ಯವನ್ನು ಕೈಗೊಂಡಿದ್ದೇವೆ. ಸಚಿವರೆಲ್ಲರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಸಮಸ್ಯೆಗಳನ್ನು ಆಲಿಸಿದ್ದಾರೆ. ಮೊದಲು ನಾವು ಕೈಗೊಂಡಿರುವ ಕೆಲಸಗಳು ಏನು ಎಂಬುದನ್ನು ಅರಿತು ನಂತರ ಕಾಂಗ್ರೆಸ್‍ನವರು ಪ್ರತಿಭಟನೆ ಮಾಡಲಿ ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago