ಬೆಂಗಳೂರು:ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಗೆ ಯಾವುದೇ ರೀತಿಯ ಮಹತ್ವ ಬೇಕಾಗಿಲ್ಲ. ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ನಡೆಸುತ್ತಿರುವ ಪ್ರತಿಭಟನೆ ಇದಾಗಿದೆ. ಇದಕ್ಕೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾ ತನಾಡಿದ ಅವರು, ಕಾಂಗ್ರೆಸ್ ನಾಯಕರು ಯಾವ ಕಾರಣಕ್ಕೆ ಪ್ರತಿಭಟನೆ ಮಾಡುತ್ತಾರೆಂಬುದೇ ಗೊತ್ತಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಿಗೆ ಇವರು ಎಷ್ಟು ಬಾರಿ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿ ನಂತರ ಪ್ರತಿಭಟನೆ ಮಾಡಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ನಾಯಕರಿಗೆ ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಮೊದಲು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.
ನೀವು ಪ್ರಶ್ನೆ ಮಾಡುವುದಿದ್ದರೆ ನಿಮ್ಮ ಹೈಕಮಾಂಡ್ ನಾಯಕರನ್ನು ಪ್ರಶ್ನೆ ಮಾಡಿ. ನಮ್ಮ ಸರ್ಕಾರದ ವಿರುದ್ಧವಾಗಲಿ, ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ನಿಮಗಿದೆಯೇ ಎಂದು ಪ್ರಶ್ನಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಸರ್ಕಾರ ತುರ್ತು ಪರಿಹಾರ ಕೈಗೊಂಡಿದೆ. ಸಂತ್ರಸ್ತರ ಖಾತೆಗೆ 10 ಸಾವಿರ ನಗದು ಜಮೆ ಮಾಡಿದ್ದೇವೆ.
ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ , ಮನೆ ನಿರ್ಮಾಣ, ದುರಸ್ತಿ ಕಾರ್ಯವನ್ನು ಕೈಗೊಂಡಿದ್ದೇವೆ. ಸಚಿವರೆಲ್ಲರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಸಮಸ್ಯೆಗಳನ್ನು ಆಲಿಸಿದ್ದಾರೆ. ಮೊದಲು ನಾವು ಕೈಗೊಂಡಿರುವ ಕೆಲಸಗಳು ಏನು ಎಂಬುದನ್ನು ಅರಿತು ನಂತರ ಕಾಂಗ್ರೆಸ್‍ನವರು ಪ್ರತಿಭಟನೆ ಮಾಡಲಿ ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…