ನಮ್ಮ ಸರ್ಕಾರವನ್ನು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ, ಜನರ ಮತ್ತು ದೇವರ ಆಶೀರ್ವಾದದಿಂದ ಸರ್ಕಾರ ಸುಭದ್ರವಾಗಿದೆ : ಸಿಎಂ ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು, : ಜನರ ಮತ್ತು ದೇವರ ಆಶೀರ್ವಾದದಿಂದ ಸರ್ಕಾರ ಸುಭದ್ರವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಹಣ ಕೈಯಲ್ಲಿ ಹಿಡಿದುಕೊಂಡು ಈ ಸರ್ಕಾರವನ್ನು ಉರುಳಿಸಲು ಕೂತಿದ್ದಾರೆ. ಆದರೆ ಜನರ ಮತ್ತು ದೇವರ ಆಶೀರ್ವಾದದಿಂದ ಸರ್ಕಾರ ಸುಭದ್ರವಾಗಿದೆ. ನಾವು ಐದು ವರ್ಷ ಪೂರೈಸುತ್ತೇವೆ ಎಂದು ಹೇಳಿದರು.

ಬಿಜೆಪಿಯ ಆಪರೇಷನ್ ಕಮಲ ಇನ್ನೂ ನಿಂತಿಲ್ಲ. ಈ ಬಗ್ಗೆ ನನಗೆ ಅನುಮಾನ ಮತ್ತೆ ಶುರುವಾಗಿದೆ. ಜೆಡಿಎಸ್‌ನ ಶಾಸಕರಿಗೆ ಬಿಜೆಪಿ ಮುಖಂಡರು ಕರೆ ಮಾಡಿ, ಈಗಾಗಲೇ ಕಾಂಗ್ರೆಸ್-ಜೆಡಿಎಸ್‌ನ ಹತ್ತು ಶಾಸಕರು ನಮ್ಮ ಕಡೆ ಬಂದಿದ್ದಾರೆ, ನೀವು ಬರುವುದಾದರೆ 10 ಕೋಟಿ ಹಣವನ್ನು ನೀವು ಕೇಳಿದ ಕಡೆಗೆ ತಂದು ಕೊಡುತ್ತೇವೆ ಅಂತಾ ಬಿಜೆಪಿಯವರು ಹೇಳಿದ್ದಾರೆ ಎಂದು ಆರೋಪಿಸಿದರು.

ಆಪರೇಷನ್ ಕಮಲ ತೆರೆ ಮರೆಯಲ್ಲಿ ನಡೆಯುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿಯು ಜೆಡಿಎಸ್ ಶಾಸಕರಿಗೆ ಕರೆ ಮಾಡಿ ಆಮೀಷ ಒಡ್ಡಿದ್ದಾರೆ. ಆದರೆ ನಮ್ಮ ಸರ್ಕಾರವನ್ನು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು