ಬೆಂಗಳೂರು, : ಜನರ ಮತ್ತು ದೇವರ ಆಶೀರ್ವಾದದಿಂದ ಸರ್ಕಾರ ಸುಭದ್ರವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಹಣ ಕೈಯಲ್ಲಿ ಹಿಡಿದುಕೊಂಡು ಈ ಸರ್ಕಾರವನ್ನು ಉರುಳಿಸಲು ಕೂತಿದ್ದಾರೆ. ಆದರೆ ಜನರ ಮತ್ತು ದೇವರ ಆಶೀರ್ವಾದದಿಂದ ಸರ್ಕಾರ ಸುಭದ್ರವಾಗಿದೆ. ನಾವು ಐದು ವರ್ಷ ಪೂರೈಸುತ್ತೇವೆ ಎಂದು ಹೇಳಿದರು.
ಬಿಜೆಪಿಯ ಆಪರೇಷನ್ ಕಮಲ ಇನ್ನೂ ನಿಂತಿಲ್ಲ. ಈ ಬಗ್ಗೆ ನನಗೆ ಅನುಮಾನ ಮತ್ತೆ ಶುರುವಾಗಿದೆ. ಜೆಡಿಎಸ್‌ನ ಶಾಸಕರಿಗೆ ಬಿಜೆಪಿ ಮುಖಂಡರು ಕರೆ ಮಾಡಿ, ಈಗಾಗಲೇ ಕಾಂಗ್ರೆಸ್-ಜೆಡಿಎಸ್‌ನ ಹತ್ತು ಶಾಸಕರು ನಮ್ಮ ಕಡೆ ಬಂದಿದ್ದಾರೆ, ನೀವು ಬರುವುದಾದರೆ 10 ಕೋಟಿ ಹಣವನ್ನು ನೀವು ಕೇಳಿದ ಕಡೆಗೆ ತಂದು ಕೊಡುತ್ತೇವೆ ಅಂತಾ ಬಿಜೆಪಿಯವರು ಹೇಳಿದ್ದಾರೆ ಎಂದು ಆರೋಪಿಸಿದರು.
ಆಪರೇಷನ್ ಕಮಲ ತೆರೆ ಮರೆಯಲ್ಲಿ ನಡೆಯುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿಯು ಜೆಡಿಎಸ್ ಶಾಸಕರಿಗೆ ಕರೆ ಮಾಡಿ ಆಮೀಷ ಒಡ್ಡಿದ್ದಾರೆ. ಆದರೆ ನಮ್ಮ ಸರ್ಕಾರವನ್ನು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…