Featured

ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು : ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ – Vishwanews24

ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು : ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ

ಬೆಂಗಳೂರು: ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಎಮರ್ಜೆನ್ಸಿ ತಂದಿದ್ದಾರೆ. ವಿಪಕ್ಷಗಳು ದೇಶದ್ರೋಗಿಗಳ ಬಂಧನ ಮಾಡಿ ಅಂತ ಧರಣಿ ಮಾಡುತ್ತಿವೆ. ಆದರೆ ಸರ್ಕಾರ ಇದುವರೆಗೂ ಯಾರನ್ನ ಬಂಧನ ಮಾಡಿಲ್ಲ. ನಾವು ಸದನದಲ್ಲಿ ಧರಣಿ ಮಾಡಿದರೂ ಸೆನ್ಸಾರ್ ಹಾಕಿದ್ರು ಎಂದು ವಾಗ್ದಾಳಿ ನಡೆಸಿದರು.

ನಮ್ಮ ಹೋರಾಟ ದೇಶದ ಬದುಕಿಗಾಗಿ. ಪಾಕ್ ಭಯೋತ್ಪಾದಕರ ಗುಂಡಿಗೆ ನಮ್ಮ ಸೈನಿಕರು ಬಲಿಯಾಗ್ತಿದ್ದಾರೆ. ನಮ್ಮ ಸರ್ಕಾರ ಇದ್ದಿದ್ರೆ ಪಾಕ್ ಪರ ಘೋಷಣೆ ಕೂಗಿದವರನ್ನ ಅಲ್ಲೇ ಗುಂಡಿಟ್ಟು ಸಾಯಿಸ್ತಿತ್ತು. ಇವರು ಬಂಧನ ಕೂಡಾ ಮಾಡದೇ ರಕ್ಷಣೆ ಮಾಡ್ತಿದ್ದಾರೆ ಎಂದು ಅಶೋಕ್  ಗರಂ ಆದರು.

ನಮ್ಮ ದೇಶದ ಯೋಧರು ಪಾಕಿಸ್ತಾನದ ಭಯೋತ್ಪಾದಕರ ಗುಂಡಿಗೆ ಎದೆಯೊಡ್ಡಿ ನಿಂತಿದ್ರೆ, ಇಲ್ಲಿ ವಿಧಾನಸೌಧದೊಳಗೆ ಪಾಕಿಸ್ತಾನಕ್ಕೆ ಜೈಕಾರ ಹಾಕುವವರ ಪರ ಕಾಂಗ್ರೆಸ್ ನಿಲ್ಲುತ್ತೆ. ನಮ್ಮ ಸರ್ಕಾರ ಇದಿದ್ರೇ ದೇಶ ದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುತಿತ್ತು ಎಂದರು.

ಕಾಂಗ್ರೆಸ್‍ನವರು ಈ ಕೇಸ್ ಮುಚ್ಚಿ ಹಾಕುವ ಕ್ಯಾಸೆಟ್ ರೆಡಿ ಮಾಡ್ತಿದ್ದಾರೆ. ಪ್ರಿಯಾಂಕಾ ಖರ್ಗೆ ಈಗಾಗಲೇ ಹೇಳಿದ್ದಾರೆ. ದೇಶದ್ರೋಹಿಗಳನ್ನ ಸೇಫ್ ಮಾಡೋ ಕೆಲಸ ಮಾಡುತ್ತಿದ್ದಾರೆ. ನೋಡ್ತಿರಿ ಎಫ್ ಎಸ್ ಎಲ್ ವರದಿ ಹೇಗೆ ಬರುತ್ತೆ ಅಂತಾ. ಎಫ್‍ಎಸ್‍ಎಲ್ ಮೂಲಕ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ಮಾಡ್ತಿದ್ದಾರೆ. ನಾಸೀರ್ ಹುಸೇನ್ ರನ್ನ ಬಂಧಿಸಿ ವಿಚಾರಣೆ ಮಾಡಬೇಕಿತ್ತು. ಅಂದು ಪ್ರತಾಪ್ ಸಿಂಹರನ್ನ ಕಟಕಟೆಯಲ್ಲಿ ನಿಲ್ಸಿದ್ರು, ಅವರೇನೂ ಇವರ ಹಾಗೆ ದೇಶದ್ರೋಹದ ಕೆಲಸ ಮಾಡಿರಲಿಲ್ಲ ಎಂದು ಸಿಡಿಮಿಡಿಗೊಂಡರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

52 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 hour ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

3 hours ago