Featured

“ನಮ್ಮ ಸರ್ಕಾರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ : ಸುನಿಲ್‌ ಕುಮಾರ್‌ -Vishwanews24

ಉಡುಪಿ : ನಮ್ಮ ಸರ್ಕಾರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ : ಸುನಿಲ್‌ ಕುಮಾರ್‌ -Vishwanews24

ಉಡುಪಿ : “ನಮ್ಮ ಸರ್ಕಾರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ” ಎಂದು ಇಂಧನ ಇಲಾಖೆ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಕೃಷಿ ಕಾಯ್ದೆ ಹಿಂಪಡೆತ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈಗಾಗಲೇ ಹತ್ತಾರು ರೈತ ಪ್ರತಿಭಟನೆಗಳು ನಡೆದಿವೆ. ವಿರೋಧ ಪಕ್ಷದವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್‌ ಹಾಗೂ ಇತರರು ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ.

“ಮೂರು ಬಿಲ್‌ಗಳ ರೈತಪರವಾಗಿ ಇರುವ ಬಿಲ್‌ಗಳಾಗಿವೆ. ಕೇಂದ್ರ ಸರ್ಕಾರ ರೈತರ ಪರವಾಗಿ ಹತ್ತಾರು ಯೋಜನೆಗಳನ್ನು ಕೊಟ್ಟಿದೆ. ನಾವು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಎಲ್ಲೋ ಎಡವಿದ್ದೇವೆ. ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತೆಗೆದುಕೊಂಡು ಹೋಗುವುದರಲ್ಲಿ ಕೊರತೆ ಆಗಿದೆ. ರೈತರ ವಿಶ್ವಾಸಗಳಿಸುವುದರಲ್ಲಿ ಕೊರತೆ ಆಗಿದೆ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್‌ ಹಾಗೂ ಇತರರು ರೈತರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ದಲ್ಲಾಳಿಗಳ ಪರ ಯಾರು ಇದ್ದಾರೆ ಎಂದು ಕೂಡಾ ಹತ್ತಾರು ಹೋರಾಟಗಳಲ್ಲಿ ತಿಳಿದುಬಂದಿದೆ” ಎಂದಿದ್ದಾರೆ.

“ಮುಂದಿನ ದಿನಗಳಲ್ಲಿ ನಾವು ಮತ್ತಷ್ಟು ರೈತರ ಹತ್ತಿರ ಹೋಗುವ ಯತ್ನವನ್ನು ಮಾಡುತ್ತೇವೆ. ಮುಂದಿನ ದಿನಗಳಲ್ಲಿ ರೈತರ ಮನವೊಲಿಸುವ ಕೆಲಸವನ್ನು ಮಾಡುತ್ತೇವೆ. ಬಿಲ್‌ನಿಂದ ರೈತರಿಗೆ ತೊಂದರೆ ಆಗುತ್ತದೋ ಅಥವಾ ಇಲ್ಲವೋ ಎನ್ನುವುದನ್ನು ಮುಂದಿನ ದಿನಗಳಲ್ಲಿ ನೋಡಬಹುದು.ರೈತರ ಬಿಲ್‌ನಲ್ಲಿ ಉದ್ದೇಶಪೂರ್ವಕ ಗಲಭೆಗಳು ನಡೆದಿವೆ. ಎಲ್ಲವನ್ನೂ ಸಹ ಬಿಜೆಪಿ ನಾಯಕತ್ವ ಮುಕ್ತವಾಗಿ ಸ್ವೀಕರಿಸುತ್ತದೆ” ಎಂದು ಹೇಳಿದ್ದಾರೆ.

ಬಿಟ್‌ ಕಾಯಿನ್‌ ಹಗರಣದ ಬಗ್ಗೆ ಮಾತನಾಡಿದ ಅವರು, “ಈ ಬಗ್ಗೆ ನಾವೆಲ್ಲೂ ತನಿಖೆ ಬೇಡ ಎಂದು ಹೇಳಿಲ್ಲ. ಎಲ್ಲಾ ರೀತಿಯಿಂದಲೂ ತನಿಖೆ ಮಾಡೇ ಮಾಡುತ್ತೇವೆ. ಸದ್ಯದಲ್ಲೇ ಯಾವ ಕಾಂಗ್ರೆಸ್‌ ಯುವ ನಾಯಕರು ಡ್ರಗ್ ಪೆಡ್ಲರ್‌‌ಗಳು ಹೇಗೆ ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ಗೊತ್ತಾಗಬೇಕು. ಇದು ಕೊನೆಗೆ ಕಾಂಗ್ರೆಸ್‌ ಕಾಲಿಗೆ ಸುತ್ತಿಕೊಳ್ಳುತ್ತದೆ” ಎಂದಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

13 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

14 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

14 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

14 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago