ಬೆಂಗಳೂರು, : “ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಜೈಲಿಗೆ ಹೋಗುತ್ತಾರೆ ಎನ್ನುವ ಆತಂಕ ನಮ್ಮದು. ವಿಧಾನಸೌಧ ಶಕ್ತಿಪೀಠ ಮಸುಕಾಗುತ್ತಿದೆ. ನಾಯಕತ್ವ ಕೂಡಾ ಕುಸಿಯುತ್ತಿದೆ” ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಸ್ತುತ ಸಂದರ್ಭ ಸಮರ್ಪಕವಾದ ನಾಯಕತ್ವದ ಅಗತ್ಯವಿದೆ. 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ಬೇಡ ಎನ್ನುವ ಪಕ್ಷದ ಸಿದ್ದಾಂತವನ್ನು ಪಾಲಿಸುವ ವಿಚಾರದ ಬಗ್ಗೆ ನಾನು ಪ್ರಸ್ತಾಪಿಸಿದ್ದೇನೆ. ಸಿಎಂ ಯಡಿಯೂರಪ್ಪ ಅವರಿಗೆ ಮೊದಲಿಗಿದ್ದ ಶಕ್ತಿ ಈಗ ಇಲ್ಲವಾಗಿದೆ” ಎಂದಿದ್ದಾರೆ.
“ಸರ್ಕಾರ ಜನರದ್ದು, ಯಾವುದೇ ಕುಟುಂಬಕ್ಕೆ ಸೇರಿಲ್ಲ. ಸರ್ಕಾರದಲ್ಲಿ ಯಡಿಯೂರಪ್ಪ ಅವರ ಕುಟುಂಬದವರ ಹಸ್ತಕ್ಷೇಪ ಇಲ್ಲ ಎನ್ನುವುದನ್ನು ನಾನು ಹೇಳುತ್ತಿಲ್ಲ. ಈ ಬಗ್ಗೆ ಸಚಿವರೇ ಹೇಳುತ್ತಿದ್ದಾರೆ. ರಾಜ್ಯದ ಜನತೆ ತಿಳಿದಿದೆ” ಎಂದು ಹೇಳಿದ್ದಾರೆ.
“ಯಡಿಯೂರಪ್ಪ ಅವರಿಂದ ಯಾವುದೇ ಪ್ರಯೋಜನ ಇಲ್ಲವಾಗಿದೆ. ಸಿಎಂ ಅವರ ಪುತ್ರ ಬಿ.ವೈ.ವಿಜಯೇಂದ್ರ ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಈ ರೀತಿಯ ನಾಯಕತ್ವದಿಂದ ಯಾವುದೇ ಪ್ರಯೋಜನವಿಲ್ಲ. ಯಡಿಯೂರಪ್ಪ ಅವರನ್ನು ಗೌರವಿಸಿ ಮುಖ್ಯಮಂತ್ರಿ ಮಾಡಿದ್ದೇವೆ. ನಮ್ಮ ಸಹಕಾರದ ಕಾರಣ ಇಂದು ಸರ್ಕಾರ ಅಸ್ತಿತ್ವಕ್ಕೆ ಬಂದಿದೆ” ಎಂದು ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…