ಮಂಗಳೂರು: ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಎರಡೂ ಕಟ್. ಬೇಕಾದ್ರೆ ತಲೆ ಕಡಿಯುವೆವು ಎಂದು ಮಾಜಿ ಸಚಿವ ಯು.ಟಿ ಖಾದರ್‌ಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಸಿಎಎ ಸಮರ್ಥನಾ ಸಮಾವೇಶದ ವೇಳೆ ಯು.ಟಿ ಖಾದರ್‌ಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಮಾವೇಶಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ಖಾದರ್‌ಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಲಯಾಳಂ ಭಾಷೆಯಲ್ಲಿ ಖಾದರ್ ಅವರಿಗೆ ಜೀವ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೇಸರಿ ಶಾಲು ಧರಿಸಿದ್ದ ಕೆಲ ಯುವಕರ ಗುಂಪು ರಸ್ತೆ ಬದಿಯಲ್ಲಿ ನಿಂತು, ‘ನಾಯಿಯ ಮಗ ಖಾದರ್, ನಮ್ಮ ಸುದ್ದಿಗೆ ಬರಬೇಡ. ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಎರಡೂ ಕಟ್ ಮಾಡ್ತೇವೆ, ಬೇಕಾದ್ರೆ ತಲೆಯನ್ನೂ ಕಡಿಯುವೆವು’ ಎಂದು ಘೋಷಣೆ ಕೂಗುತ್ತಾ, ಚಪ್ಪಾಳೆ ತಟ್ಟಿ ಡ್ಯಾನ್ಸ್ ಮಾಡುತ್ತಾ ಬೆದರಿಕೆ ಹಾಕುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.
ಸುಮಾರು 56 ಸೆಕೆಂಡ್ ಇರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಆರಂಭದಲ್ಲಿ ಜೈ, ಜೈ ಬಿಜೆಪಿ ಎಂದು ಯುವಕರು ಘೋಷಣೆ ಕೂಗಿರುವ ದೃಶ್ಯಗಳು ಕೂಡ ಇದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರೇ ಯು.ಟಿ ಖಾದರ್‌ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…