Featured

ನಮ್ಮ ಹತ್ತು ಶಾಸಕರಿಗೆ ಕೈ ಹಾಕಿದರೆ, ನಾವು ಅವರ ಇಪ್ಪತ್ತು ಶಾಸಕರನ್ನು ಸೆಳೆಯುತ್ತೇವೆ :ದಿನೇಶ್ ಗುಂಡೂರಾವ್‌ -Vishwanews24

ಹುಬ್ಬಳ್ಳಿ: “ನಮ್ಮ ಹತ್ತು ಶಾಸಕರಿಗೆ ಕೈ ಹಾಕಿದರೆ, ನಾವು ಅವರ ಇಪ್ಪತ್ತು ಶಾಸಕರನ್ನು ಸೆಳೆಯುತ್ತೇವೆ. ಆ ಮಟ್ಟದ ಸಂಪರ್ಕ, ಸಾಮರ್ಥ್ಯ ನಮಗೂ ಇದೆ.  ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ವಾಗ್ಧಾಳಿ ನಡೆಸಿದರು.

“ಕಳೆದೊಂದು ವರ್ಷದಿಂದ ಬಿಜೆಪಿಯವರು ಆಡುತ್ತಿರುವ ಎಲ್ಲ ಆಟಗಳನ್ನು ನೋಡಿದ್ದೇವೆ. ಅವರ ಆಟಕ್ಕೆ ಪ್ರತಿ ಆಟದ ಎದುರೇಟು ನೀಡಬಲ್ಲ ಕಲೆ ನಮಗೂ ಗೊತ್ತಿದೆ. ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ತಿಳಿಯುವುದು ಬೇಡ’ ಎಂದು ಖಡಕ್‌ ಎಚ್ಚರಿಕೆ ನೀಡಿದರು. ಕುಂದಗೋಳ, ಚಿಂಚೋಳಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ, ಬಿಜೆಪಿ ನಾಯಕರಿಂದ ಆಕ್ಷೇಪಾರ್ಹ ಹೇಳಿಕೆ, ಸಮ್ಮಿಶ್ರ ಸರ್ಕಾರ ಅಸ್ಥಿರ ಯತ್ನ, ಲೋಕಸಭೆ ಚುನಾವಣೆ ಫ‌ಲಿತಾಂಶ ಇನ್ನಿತರ ವಿಷಯಗಳ ಕುರಿತಾಗಿ ದಿನೇಶ ಗುಂಡೂರಾವ್‌ ಅವರು “ಉದಯವಾಣಿ’ಯೊಂದಿಗೆ ತಮ್ಮ ಮನದಾಳದ ಅನಿಸಿಕೆ ಹಂಚಿಕೊಂಡರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಲೇ ಬಂದಿದ್ದಾರೆ. ಪದೇಪದೆ ಮುಖಭಂಗ ಅನುಭವಿಸುತ್ತಿದ್ದಾರೆ. ಲೋಕಸಭೆ ಹಾಗೂ ಹಣದ ಆಮಿಷವೊಡ್ಡಿ ಡಾ| ಉಮೇಶ ಜಾಧವ ಒಬ್ಬರನ್ನು ಸೆಳೆದಿದ್ದಾರಷ್ಟೆ. ಮಾತೆತ್ತಿದರೆ ಬಿಜೆಪಿ ನಾಯಕರು ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುತ್ತಾರೆ. ಅವರಿಗೆ ಗೊತ್ತಿರಲಿ, ನಮಗೂ ಬಿಜೆಪಿ ಶಾಸಕರ ಸಂಪರ್ಕ ಇದೆ.

ಮೇ 23ರ ನಂತರ ಸಮ್ಮಿಶ್ರ ಸರ್ಕಾರ ಇನ್ನಷ್ಟು ಗಟ್ಟಿಗೊಂಡು, ಬಿಜೆಪಿಗೆ ದೊಡ್ಡ ನಿರಾಸೆ ಕಾದಿದೆ. ರಾಷ್ಟ್ರಮಟ್ಟದಲ್ಲೂ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಸರ್ಜಿಕಲ್‌ ಸ್ಟ್ರೈಕ್‌ ಸೇರಿ ಹಲವು ಭಾವನಾತ್ಮಕ ವಿಷಯಗಳ ಮೂಲಕ ಯುವಕರನ್ನು ಸೆಳೆಯುವ ಯತ್ನದಿಂದಲೇ ನಾವು ಗೆಲ್ಲುತ್ತೇವೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ ಎಂದರು..

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago