Featured

ನೆರೆಯಿಂದ ಹಾನಿಯಾಗಿದ್ದ ಸೇತುವೆ ಮೇಲೆಯೇ ಭಾರಿ ವಾಹನ ಚಲಾಯಿಸಿಕೊಂಡು ಬಂದ ಲಾರಿ ಚಾಲಕನ ತರಾಟೆಗೆ ತೆಗೆದೊಂಡ ಶಾಸಕಿ ಅಂಜಲಿ ನಿಂಬಾಳ್ಕರ್ -Vishwanews24

ಬೆಳಗಾವಿ : ಮಳೆಯಿಂದ ಸೇತುವೆ ಹಾನಿಗೊಳಗಾಗಿತ್ತು. ಆದರೂ ಕಿರಿದಾದ ಸೇತುವೆಯ ಮೇಲೆ ಚಾಲಕರು ಲಾರಿ ಚಲಾಯಿಸುತ್ತಿದ್ದರು. ಇದನ್ನು ನೋಡಿದ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನನ್ನು ತರಾಟೆ ತೆಗೆದುಕೊಂಡಿದ್ದಾರೆ.

ಖಾನಾಪುರ ಪಟ್ಟಣದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಲಾರಿ ಚಾಲಕನಿಗೆ ಬೈದು ವಾಪಸ್ ಕಳುಹಿಸಿದ್ದಾರೆ. ಇಷ್ಟು ದೊಡ್ಡ ಗಾಡಿ ಕಿರಿದಾದ ಸೇತುವೆ ಮೇಲೆ ಬಂದರೆ ಸಣ್ಣ ವಾಹನಗಳು ಹೇಗೆ ಓಡಾಡುತ್ತವೆ. ನೀನು ಒಂದು ದಿನ ಅರ್ಧ ಗಂಟೆ ಬಂದು ಹೋಗುತ್ತೀಯಾ, ನಂತರ ಇಲ್ಲಿನ ಹಾಗೂ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶದಿಂದ ಹೇಳಿದರು.

ಖಾನಾಪುರ-ಪಣಡಿ ಸಂಪರ್ಕ ಸೇತುವೆ ಹಾಳಾಗಿತ್ತು. ಹೀಗಾಗಿ ಮರು ನಿರ್ಮಾಣ ಯೋಜನೆಗೆ ಶಾಸಕ ಅಂಜಲಿ ನಿಂಬಾಳ್ಕರ್ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಭಾರಿ ವಾಹನ ನಿಷೇಧದ ಬೋರ್ಡ್ ಇದ್ದರೂ, ಲಾರಿ ಚಾಲಕನೊಬ್ಬ ಸೇತುವೆ ಮೇಲೆ ಚಲಾಯಿಸಲು ಯತ್ನಿಸಿದನು.

ಇದನ್ನು ಸ್ಥಳದಲ್ಲಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ಗಮನಿಸಿದ್ದೇ ತಡೇ, ಸೇತುವೆ ಬಳಿ ತೆರಳಿ ಲಾರಿಯ ಮುಂದೆ ನಿಂತು ಚಾಲಕನಿಗೆ ಬೋರ್ಡ್ ನೋಡದೇ ದುರಸ್ತಿಯಾಗಿರುವ ಸೇತುವೆಯ ಮೇಲೆ ಲಾರಿ ಚಲಾಯಿಸಲು ಪ್ರಯತ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಈ ಸೇತುವೆ ಮೇಲೆ ಚಲಾಯಿಸುವಂತಿಲ್ಲ ಎಂದು ಖಡಕ್ ಆಗೇ ಸೂಚಿಸಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

20 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago