ಬೆಂಗಳೂರು, ‘ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದ್ದು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ’ ಎಂದು ಡಿ.ವಿ.ಸದಾನಂದ ಗೌಡ ಅವರು ಜನರಲ್ಲಿ ಮನವಿ ಮಾಡಿದರು.
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೋಮವಾರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ನಾಗದೇವನಹಳ್ಳಿ ಎರಡನೇ ಹಂತದ ಜ್ಞಾನ ಭಾರತಿ ಬಿಡಿಎ ಲೇಔಟ್ ನಲ್ಲಿರುವ ಕೆವಿ ಆರ್ಕಿಡ್ಸ್ ಅಪಾರ್ಟ್ಮೆಂಟ್ ನಾಗರಿಕರೊಂದಿಗೆ ಸಂವಾದ ನಡೆಸಿದ ಅವರು, ‘ನೀವು ಸದಾನಂದ ಗೌಡರಿಗಾಗಿ ಮತ ಹಾಕಬೇಡಿ, ನರೇಂದ್ರ ಮೋದಿಯವರಿಗಾಗಿ ಮತ ಹಾಕಿ.’ ಎಂದು ಕೋರಿದರು.
ಎಲ್ಲರೂ ತಪ್ಪದೇ ಮತ ಚಲಾಯಿಸಬೇಕು. ಸರಣಿ ರಜೆಗಳಿವೆ ಎಂದು ಪ್ರವಾಸಕ್ಕೆ ಅಥವಾ ಹುಟ್ಟೂರಿಗೆ ತೆರಳಬೇಡಿ. ಮತದಾನ ಮಾಡಿದ ನಂತರ ನಿಮ್ಮ ಕಾರ್ಯಕ್ರಮಗಳನ್ನು ಹಾಕಿಕೊಳ್ಳಿ. ದೇಶದಲ್ಲಿ ಮತ್ತೊಮ್ಮೆ ಮೋದಿ ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದ್ದು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡೋಣ ಎಂದು ಹೇಳಿದ್ದಾರೆ.
ಈ ಬಾರಿಯೂ ತಮಗೆ ಮತ ನೀಡಿ ಪುನರಾಯ್ಕೆ ಮಾಡಬೇಕು ಎಂದು ಜನರಲ್ಲಿ ಮನವಿ ಮಾಡಿದರು. ಏಪ್ರಿಲ್ 18ರಂದು ಬೆಂಗಳೂರು ಉತ್ತರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಕೃಷ್ಣ ಬೈರೇಗೌಡ ಅವರು ಕಣದಲ್ಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…