ಮಹಾರಾಷ್ಟ್ರ ಸೇವಾಗ್ರಾಮ : ವಿಭಜನಕಾರಿ ರಾಜಕೀಯ ಮತ್ತು ದ್ವೇಷ ಮತ್ತು ಹಿಂಸೆಯ ಸಿದ್ಧಾಂತ ಅನುಸರಿಸುತ್ತಿರುವ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೆಸೆಯಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಸೇವಾಗ್ರಾಮದ ಮಹಾದೇವ ಭವನದಿಂದ ಗಾಂಧೀಜಿಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಕರೆ ನೀಡಿದೆ.
ಇಲ್ಲಿಂದ 1942ರಲ್ಲಿ ಕಾಂಗ್ರೆಸ್ ಪಕ್ಷ ಬ್ರಿಟಿಷರ ವಿರುದ್ಧ ಭಾರತ ಬಿಟ್ಟು ತೊಲಗಿ ಚಳವಳಿಗೆ ಕರೆ ನೀಡಿತ್ತು.
ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಬೂಟಾಟಿಕೆ ಪ್ರದರ್ಶಿಸುತ್ತಿದ್ದು, ಚುನಾವಣಾ ಲಾಭಕ್ಕಾಗಿ ಮಹಾತ್ಮಗಾಂಧೀಜಿಯವರ ಪರಂಪರೆಯನ್ನು ಸ್ವಾಧೀನಪಡಿಸಿಕೊಂಡಿವೆ ಎಂಬ ನಿರ್ಣಯವನ್ನು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದೆ.
“ಮೋದಿ ಸರ್ಕಾರ ವಿಭಜನಕಾರಿ ರಾಜಕೀಯ ಅನುಸರಿಸುತ್ತಿದ್ದು, ದ್ವೇಷ ಮತ್ತು ಹಿಂಸೆಯನ್ನು ಹರಡುತ್ತಿದೆ” ಎಂದು ನಿರ್ಣಯದಲ್ಲಿ ಆಪಾದಿಸಲಾಗಿದೆ. ಇಂಥ ವಾತಾವರಣ ಹಾಗೂ ಕಾರಣಗಳು ಗಾಂಧೀಜಿಯವರ ಹತ್ಯೆಗೂ ಕಾರಣವಾಗಿತ್ತು ಎಂದು ವಿವರಿಸಿದೆ.
ಭಾರತದ ಯೋಚನಾ ಲಹರಿ, ಅದರ ಆತ್ಮ ಹಾಗೂ ದೇಹಕ್ಕೆ ಗಾಂಧೀಜಿಯವರ ಕೊಡುಗೆ ಅಪಾರ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಯವರ ಜೈ ಜವಾನ್ ಜೈಕಿಸಾನ್ ಘೋಷಣೆ ಕೇವಲ ಘೋಷಣೆಯಾಗಿರದೇ ಅದು ಜೀವನ ವಿಧಾನವಾಗಿತ್ತು ಎಂದು ಸಭೆಯಲ್ಲಿ ಬಣ್ಣಿಸಲಾಯಿತು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡ ಗುಲಾಂ ನಬಿ ಆಝಾದ್ ಮತ್ತಿತರರು ಭಾಗವಹಿಸಿದ್ದರು..
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…