ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದಾಖಲೆ ಮುರಿದಿದ್ದಾರೆ. ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಎರಡನೇ ವ್ಯಕ್ತಿ ಮೋದಿ.
4,078 ದಿನಗಳ ಕಾಲ ಪ್ರಧಾನಿಯಾಗಿ ಅಧಿಕಾರ ನಡೆಸುತ್ತಿದ್ದ, ಪ್ರಧಾನಿ ಮೋದಿ ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಬೀಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇವತ್ತಿಗೆ 4,078 ದಿನಗಳನ್ನು ಪೂರೈಸಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ 4077 ದಿನಗಳ ಕಾಲ ಪ್ರಧಾನಿ ಆಗಿದ್ದರು. 1966ರ ಜನವರಿ 24 ರಿಂದ 1977ರ ಮಾರ್ಚ್ 24ರ ವರೆಗೆ ಇಂದಿರಾ ಗಾಂಧಿಯವರು 4,077 ದಿನಗಳ ಕಾಲ ಪ್ರಧಾನಿ ಆಗಿದ್ದರು. ಅಲ್ಲದೇ, ಸತತ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿಯಾಗಿ ಮೋದಿ ದಾಖಲೆ ಬರೆದರೆ, ಮೊದಲ ಸ್ಥಾನದಲ್ಲಿ ಜವಾಹರಲಾಲ್ ನೆಹರೂ ದಾಖಲೆ ಇದೆ.
74 ವರ್ಷ ವಯಸ್ಸಿನ ಪ್ರಧಾನಿ ಮೋದಿ, ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಮತ್ತು ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ಪ್ರಧಾನಿ ಕೂಡ ಆಗಿದ್ದಾರೆ. ಗುಜರಾತ್‌ನಲ್ಲಿ ಜನಿಸಿದ ಬಿಜೆಪಿ ನಾಯಕ, ಕೇಂದ್ರ ಸರ್ಕಾರದ ಮುಖ್ಯಸ್ಥರಾಗಿ ಎರಡು ಪೂರ್ಣ ಅವಧಿಗಳನ್ನು ಪೂರ್ಣಗೊಳಿಸಿದ ಏಕೈಕ ಕಾಂಗ್ರೆಸ್ಸೇತರ ನಾಯಕ ನರೇಂದ್ರ ಮೋದಿ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…