ಮಂಗಳೂರು: ನಳಿನ್ ಕುಮಾರ್ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, “ಈ ಸರ್ಕಾರದಲ್ಲಿ ಹೇಳೋರಿಲ್ಲ ಕೇಳೋರಿಲ್ಲ, ನಿಜ ಹೇಳಬೇಕಾದ್ರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ. ವರ್ಗಾವಣೆ ದಂಧೆ ಬಿಟ್ಟರೆ, ಆಡಳಿತದಲ್ಲಿ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ಭೀಕರ ಪ್ರವಾಹ ಬಂದಿದ್ದರೂ ಸಂತ್ರಸ್ತರಿಗೆ ಸೂಕ್ತ ಪರಿಹಾರದ ನೀಡುವ ಕೆಲಸ ಆಗುತ್ತಿಲ್ಲ.ಇದರೊಂದಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿದ್ದೂ, ದಿನನಿತ್ಯ ಕೊಲೆ ಸುಲಿಗೆಗಳು ನಡೆಯುತ್ತಿದೆ. ಬಿಜೆಪಿಯವರು ಅಪರೇಷನ್ ಕಮಲ ಬಿಟ್ಟರೆ ಬೇರೇನೂ ಕೆಲಸ ಮಾಡಲ್ಲ. ಇದಕ್ಕಾಗಿ ದೇಶದಲ್ಲಿ ಇವರು ಭ್ರಷ್ಟಾಚಾರ ನಡೆಸಿರುವ ದುಡ್ಡನ್ನು ಬಳಸಿಕೊಳ್ಳುತ್ತಾರೆ. ಐಟಿ-ಇಡಿ ಬಿಟ್ಟು ಬೆದರಿಸೋದು, ಹಾಗೂ ಅಪರೇಷನ್ ಕಮಲ ನಡೆಸೋದು ಬಿಟ್ಟರೆ ಬಿಜೆಪಿಗರಿಗೆ ಬೇರೇನೂ ಗೊತ್ತಿಲ್ಲ” ಎಂದು ಕಿಡಿಕಾರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…