Featured

ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ : ಸಿದ್ದರಾಮಯ್ಯ -Vishwanews24

ಮಂಗಳೂರು: ನಳಿನ್ ಕುಮಾರ್‌ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, “ಈ ಸರ್ಕಾರದಲ್ಲಿ ಹೇಳೋರಿಲ್ಲ ಕೇಳೋರಿಲ್ಲ, ನಿಜ ಹೇಳಬೇಕಾದ್ರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ. ವರ್ಗಾವಣೆ ದಂಧೆ ಬಿಟ್ಟರೆ, ಆಡಳಿತದಲ್ಲಿ ಯಾವುದೇ ‌ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ಭೀಕರ ಪ್ರವಾಹ ಬಂದಿದ್ದರೂ ಸಂತ್ರಸ್ತರಿಗೆ ಸೂಕ್ತ ಪರಿಹಾರದ ನೀಡುವ ಕೆಲಸ ಆಗುತ್ತಿಲ್ಲ.ಇದರೊಂದಿಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿದ್ದೂ, ದಿನನಿತ್ಯ ಕೊಲೆ ಸುಲಿಗೆಗಳು ನಡೆಯುತ್ತಿದೆ. ಬಿಜೆಪಿಯವರು ಅಪರೇಷನ್ ಕಮಲ ಬಿಟ್ಟರೆ ಬೇರೇನೂ ಕೆಲಸ ಮಾಡಲ್ಲ. ಇದಕ್ಕಾಗಿ ದೇಶದಲ್ಲಿ ಇವರು ಭ್ರಷ್ಟಾಚಾರ ನಡೆಸಿರುವ ದುಡ್ಡನ್ನು ಬಳಸಿಕೊಳ್ಳುತ್ತಾರೆ. ಐಟಿ-ಇಡಿ ಬಿಟ್ಟು ಬೆದರಿಸೋದು, ಹಾಗೂ ಅಪರೇಷನ್ ಕಮಲ ನಡೆಸೋದು ಬಿಟ್ಟರೆ ಬಿಜೆಪಿಗರಿಗೆ ಬೇರೇನೂ ಗೊತ್ತಿಲ್ಲ” ಎಂದು ಕಿಡಿಕಾರಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago