ಬೆಂಗಳೂರು: ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಅನಗತ್ಯ ಆರೋಪ ಮಾಡುತ್ತಿದ್ದು, ಅವರು ದಲಿತರು, ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಹೇಳಿದ್ದಾರೆ.
ಇನ್ನು ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುತ್ತಿರಾ ಮತ್ತು ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ ಎಂದು ನಳಿನ್ ಕುಮಾರ್ ಕಟೀಲ್ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…