ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಆಗಮಿಸಿದ್ದ ವರನ ಗೆಳೆಯರು 5 ಲೀಟರ್ ಪೆಟ್ರೋಲ್ ಅನ್ನು ದಂಪತಿಗೆ ಉಡುಗೊರೆಯಾಗಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ದೇಶದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಅಧಿಕವಾಗಿದ್ದರಿಂದ ಸ್ನೇಹಿತರು ನವದಂಪತಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ ಎನ್ನಲಾಗಿದೆ.
ವೇದಿಕೆಯ ಮೇಲೆ ನಿಂತಿದ್ದ ವಧು-ವರಿಗೆ ಅತಿಥಿಗಳು ಶುಭಾಶಯವನ್ನು ತಿಳಿಸುತ್ತಿದ್ದರು. ಈ ವೇಳೆ ಅವರ ಸ್ನೇಹಿತರು ಒಟ್ಟಾಗಿ ಬಂದು 5 ಲೀಟರ್ ನ ಪೆಟ್ರೋಲ್ ಕ್ಯಾನೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಸ್ನೇಹಿತರು ಗಿಫ್ಟ್ ಕೊಟ್ಟಾಗ ನಗುತ್ತಲೇ ವಧು-ವರ ಸ್ವೀಕರಿಸಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದರೆಲ್ಲರು ನಕ್ಕಿದ್ದಾರೆ. ಅಲ್ಲದೇ ಕೆಲವರು ಗಿಫ್ಟ್ ಕೊಡುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಆಗಿದ್ದು, ಸದ್ಯ ಎಲ್ಲೆಲ್ಲೂ ಹರಿದಾಡುತ್ತಿದೆ.
ವಿದ್ಯಾರ್ಥಿ ಪ್ರಭು ಮೊದಲಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶದಾದ್ಯಂತ ಇಂಧನ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸಲು ಇದೊಂದು ಪ್ರಯತ್ನವಾಗಿದೆ. ಇಂಧನ ಬೆಲೆಗಳು ದೇಶಾದ್ಯಂತ ತೀವ್ರವಾಗಿ ಏರುತ್ತಿವೆ. ಹಾಗಾಗಿ ವರನ ಸ್ನೇಹಿತರಲ್ಲಿ ಕೆಲವರು ಪೆಟ್ರೋಲ್ ನನ್ನು ದಂಪತಿಗೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದರು. ಜೊತೆಗೆ ಈ ಮೂಲಕ ಬೆಲೆಬಾಳುವ ಉತ್ಪನ್ನದ ಕುರಿತು ಜನರನ್ನು ಎಚ್ಚರಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 85.15 ರೂ. ತಲುಪಿದೆ. ಇದು ರಾಜ್ಯದಲ್ಲಿಯೇ ಅಧಿಕವಾಗಿದೆ. ಪೆಟ್ರೋಲ್ ವೆಚ್ಚದಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಸರ್ಕಾರ ಈ ವಿಚಾರದಲ್ಲಿ ಗಮನಹರಿಸಬೇಕು ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…