Featured

ನವದೆಹಲಿ : ತಾಜ್‌ಮಹಲ್‌ನ ಮುಚ್ಚಿರುವ ಕೋಣೆಗಳ ಪೋಟೋ ಬಿಡುಗಡೆ – Vishwanews24

ನವದೆಹಲಿ : ತಾಜ್‌ಮಹಲ್‌ನ ಮುಚ್ಚಿರುವ ಕೋಣೆಗಳ ಪೋಟೋ ಬಿಡುಗಡೆ

ನವದೆಹಲಿ : ವಿಶ್ವವಿಖ್ಯಾತ ಆಗ್ರಾದ ತಾಜ್‌ಮಹಲ್‌ನಲ್ಲಿ ಮುಚ್ಚಿರುವ 22 ಕೋಣೆಗಳನ್ನು ತೆರೆಯಬೇಕೆನ್ನುವ ಅರ್ಜಿಯೊಂದು ಅಲಹಾಬಾದ್‌ ನ್ಯಾಯಾಲಯದ ಮೆಟ್ಟಿಲೇರಿ ಸುದ್ದಿ ಮಾಡಿದ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಆ ಕೋಣೆಗಳ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಮುಚ್ಚಿದ್ದ ಕೋಣೆಗಳಲ್ಲಿ ಈ ಹಿಂದೆ ಮಾಡಲಾದ ಕಾಮಗಾರಿಯ ಫೋಟೋಗಳನ್ನು ಜನವರಿ 2022 ರಲ್ಲಿ ಫೋಟೋಗಳು ಪ್ರಸಾರ ಮಾಡಲಾಗಿದ್ದು ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿವೆ ಎಂದು ಆಗ್ರಾ ಎಎಸ್‌ಐ ಮುಖ್ಯಸ್ಥ ಆರ್‌ಕೆ ಪಟೇಲ್ ತಿಳಿಸಿದ್ದಾರೆ. ಈ ಪೋಟೋಗಳಲ್ಲಿ ಅದರಲ್ಲಿ ಅಲ್ಲಿನ ಗೋಡೆಗಳು ಕಾಮಗಾರಿಗೂ ಮೊದಲು ಮತ್ತು ನಂತರ ಹೇಗೆ ಕಾಣಿಸುತ್ತಿದ್ದವು ಎನ್ನುವುದನ್ನು ವಿವರಿಸುವ ನಾಲ್ಕು ಫೋಟೋಗಳಿವೆ.

ಪ್ಲಾಸ್ಟರಿಂಗ್‌ ಮತ್ತು ಪೇಂಟಿಂಗ್‌ ಕೆಲಸ ಮಾಡಿರುವುದನ್ನು ಫೋಟೋಗಳಲ್ಲಿ ಗಮನಿಸಬಹುದು. ಈ ಕೊಠಡಿಗಳಲ್ಲಿ ಯಾವುದೇ ರಹಸ್ಯಗಳಿಲ್ಲ ಎಂದು ಈ ಹಿಂದೆಯೇ ಎಎಸ್‌ಐ ಅಧಿಕಾರಿಗಳು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಸ್ಮಾರಕಗಳನ್ನು ಸಂರಕ್ಷಿಸುವುದು ಎಎಸ್‌ಐ ಯ ಪ್ರಮುಖ ಕರ್ತವ್ಯವಾಗಿದೆ.

ಅಯೋಧ್ಯೆಯ ಬಿಜೆಪಿ ನಾಯಕ ಡಾ.ರಜನೀಶ್ ಸಿಂಗ್ ಅವರು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದಲ್ಲಿ ತಾಜ್ ಮಹಲ್‌ನಲ್ಲಿರುವ ಒಟ್ಟು 22 ಮುಚ್ಚಿದ ಕೊಠಡಿಗಳನ್ನು ಬಾಗಿಲುಗಳನ್ನು ತೆರೆಯುವಂತೆ ಒತ್ತಾಯಿಸಿ ರಿಟ್ ಅರ್ಜಿ ಸಲ್ಲಿಸಿದ್ದು ಕೋರ್ಟ್ ಈ ಮನವಿಯನ್ನು ತಳ್ಳಿಹಾಕಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago