ನವದೆಹಲಿ: 7ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ – Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: 7ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ – Vishwanews24

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಮಸೂದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ನಿರತ ರೈತರೊಂದಿಗೆ ಕೇಂದ್ರ ಸರ್ಕಾರ ನಡೆಸಿದ ಪ್ರಯತ್ನಗಳು ವಿಫಲಗೊಂಡಿದ್ದು, ಗುರುವಾರ ಮತ್ತೊಂಂದು ಸುತ್ತಿನ ಸಭೆ ನಡೆಸಲು ಮುಂದಾಗಿದೆ.

ಇದೆಲ್ಲದರ ನಡುವೆ ಇಂದು ಸಹ ರೈತರ ಸಂಘಟನೆಗಳು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ್ದು, ಪ್ರತಿಭಟನಾನಿರತ ರೈತರು ದೆಹಲಿ ಮತ್ತು ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿದ್ದಾರೆಂದು ತಿಳಿದುಬಂದಿದೆ.

ಪಶ್ಚಿಮ ಉತ್ತರಪ್ರದೇಶದ ವಿವಿಧ ಜಿಲ್ಲೆಗಳ ರೈತರು ದೆಹಲಿ-ನೊಯ್ಡಾ ಗಡಿ ಭಾಗದಲ್ಲಿ ಜಮಾಯಿಸಿದ್ದು, ದೆಹಲಿಯಲ್ಲಿ ಹರಿಯಾಣ-ಪಂಜಾಬ್ ರೈತರು ಆಂಭಿಸಲಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜಧಾನಿಗೆ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ.

ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಪ್ರಯಾಣಿಕರು ಚಿಲ್ಲಾ ಮಾರ್ಗ ಬಳಸದೆ ದೆಹಲಿ-ನೋಯ್ಡಾ ಡೈರೆಕ್ಟ್ (ಡಿಎನ್‌ಡಿ) ಅಥವಾ ಕಲಿಂದಿ ಕುಂಜ್ ರಸ್ತೆಯನ್ನು ಬಳಸುವಂತೆ ದೆಹಲಿ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಗೌತಮ್ ಬುದ್ಧ ದ್ವಾರ ಬಳಿ ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ನೋಯ್ಡಾ-ಲಿಂಕ್ ರಸ್ತೆಯ ಚಿಲ್ಲಾ ಗಡಿಯನ್ನು ಮುಚ್ಚಲಾಗಿದೆ.