ಮಂಗಳೂರು,:ಇದೇ ಸೆಪ್ಟೆಂಬರ್ 28ರಿಂದ ಮಂಗಳೂರು ಮಹಾನಗರದಲ್ಲಿ ನವರಾತ್ರಿ ಹಬ್ಬದ ಆಚರಣೆಗಳು ಪ್ರಾರಂಭವಾಗಲಿದ್ದು, ವಿವಿಧ ಸೇವಾ ಸಮಿತಿಗಳಿಂದ ಹಲವೆಡೆ ಸಾರ್ವಜನಿಕ ಶಾರದಾ ಮಹೋತ್ಸವಗಳು ನಡೆಯಲಿವೆ. ಮೈಸೂರಿನಂತೆ ಆದ್ದೂರಿಯಾಗಿ ಇಲ್ಲಿ ಕೂಡ ಮಂಗಳೂರು ದಸರಾ ಉತ್ಸವವನ್ನು ಆಚರಿಸಲಾಗುತ್ತದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಅದೇ ರೀತಿಯಲ್ಲಿ ವಿವಿಧ ದೇವಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆದ್ದರಿಂದ ಯಾವುದೇ ಯುವಕ ಮಂಡಲಗಳು, ಶಾರದಾ ಮಹೋತ್ಸವ ಸೇವಾ ಸಮಿತಿಯವರು ಸಾರ್ವಜನಿಕ ಶಾರದಾ ಮಹೋತ್ಸವವನ್ನು ಆಚರಿಸಲು ವಿದ್ಯುತ್ ಸಂಪರ್ಕದ ಬಗ್ಗೆ ಅರ್ಜಿ ಸಲ್ಲಿಸಿದ್ದಲ್ಲಿ ಮೆಸ್ಕಾಂ ಕಚೇರಿಯಿಂದ ಯಾವುದೇ ವಿಳಂಬ ಮಾಡದೇ ಮಂಜೂರು ಮಾಡಬೇಕು.
ಹಾಗೆ ಶಾರದಾ ಮಾತೆಯ ಶೋಭಾಯಾತ್ರೆ ಮಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸುವುದರಿಂದ ಎಲ್ಲಾ ರಸ್ತೆಗಳಲ್ಲಿ ಯಾವುದೇ ಹೊಂಡ, ಗುಂಡಿಗಳಿದ್ದಲ್ಲಿ ಅದನ್ನು ತಕ್ಷಣ ಮುಚ್ಚಿ ಶೋಭಾಯಾತ್ರೆ ಸರಾಗವಾಗಿ ಸಾಗಲು ಅನುಕೂಲವಾಗುವಂತೆ ಮಂಗಳೂರು ಮಹಾನಗರ ಪಾಲಿಕೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು.
ನಗರದಲ್ಲಿ ಶೋಭಾಯಾತ್ರೆ ಅಥವಾ ದಸರಾಗೆ ಸಂಬಂಧಿಸಿದ ಇತರ ಯಾವುದೇ ಅನುಮತಿಯನ್ನು ಪೊಲೀಸ್ ಕಮೀಷನರೇಟ್ ಕಚೇರಿಯಿಂದ ಕೊಡಲು ಸಹಕರಿಸಬೇಕೆಂದು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…