ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ ಮಾರ್ಪಾಡು ಮಾಡಲಾಗುವುದು ಎಂದು ಆದೇಶಿಸಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಆದೇಶಿಸಿದ್ದಾರೆ.
ಇದೇ ಸೆ.26ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 05ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಿ ಬದಲಿ ವ್ಯವಸ್ಥೆ ಸೂಚಿಸಿ ಆದೇಶಿಸಿದ್ದಾರೆ.
ಮಂಗಳೂರು- ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್‍ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.
ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಸುವುದು.
ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್‍ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರುವುದು.
ರಥಬೀದಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. (ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ-2022
ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…