ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ.
ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು.
ಅಲ್ಲಿ ಸೂರಜ್ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಮಗನ ಜೊತೆಯಲ್ಲೇ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಶ್ರೀಲಂಕಾಗೆ ಹನಿಮೂನ್‌ಗೆ ತೆರಳಿದ್ದಾಗ ಸೂರಜ್‌ಗೆ ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಗಾನವಿಗೆ ಸಂಬಂಧ ಇದ್ದ ವಿಚಾರ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದಿದೆ.
ಗಾನವಿ ಬೆಂಗಳೂರಿಗೆ ಮರಳಿದ್ದರೂ ಬೇರೊಬ್ಬನ ಜೊತೆ ವಿವಾಹ ಪೂರ್ವ ಸಂಬಂಧ ಇದ್ದ ಕಾರಣ ಆಕೆಯನ್ನು ಸೂರಜ್ ಕುಟುಂಬ ಸ್ವೀಕರಿಸಲಿಲ್ಲ. ಸೂರಜ್ ಕುಟುಂಬದಿಂದ ಅವಮಾನವಾಗಿದ್ದಕ್ಕೆ ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…