Featured

ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ನೇಣಿಗೆ ಶರಣು – vishwanews24

ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ

ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ.

ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್‌ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು.

ಅಲ್ಲಿ ಸೂರಜ್ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ. ಮಗನ ಜೊತೆಯಲ್ಲೇ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಶ್ರೀಲಂಕಾಗೆ ಹನಿಮೂನ್‌ಗೆ ತೆರಳಿದ್ದಾಗ ಸೂರಜ್‌ಗೆ ವಿವಾಹಕ್ಕೂ ಮುನ್ನ ಬೇರೊಬ್ಬನ ಜೊತೆ ಗಾನವಿಗೆ ಸಂಬಂಧ ಇದ್ದ ವಿಚಾರ ಗೊತ್ತಾಗಿ ದಂಪತಿ ಮಧ್ಯೆ ಜಗಳ ನಡೆದಿದೆ.

ಗಾನವಿ ಬೆಂಗಳೂರಿಗೆ ಮರಳಿದ್ದರೂ ಬೇರೊಬ್ಬನ ಜೊತೆ ವಿವಾಹ ಪೂರ್ವ ಸಂಬಂಧ ಇದ್ದ ಕಾರಣ ಆಕೆಯನ್ನು ಸೂರಜ್‌ ಕುಟುಂಬ ಸ್ವೀಕರಿಸಲಿಲ್ಲ. ಸೂರಜ್‌ ಕುಟುಂಬದಿಂದ ಅವಮಾನವಾಗಿದ್ದಕ್ಕೆ ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಳು.

 

Vishwa News 24

Recent Posts

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwnaews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

12 seconds ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

10 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

58 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago