ತೆಲಂಗಾಣ,: ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಅಪ್ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.
ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಪ್ರಣಯ್ ಯೂಟ್ಯೂಬರ್ ಈ ವಿಡಿಯೋ ವೈರಲ್ ಆಗಿದ್ದುಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಡಿಯೋದ ಥಂಬ್ನೈಲ್ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್ಲೋಡ್ ಮಾಡಿದ್ದ.
ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್ನಿಂದ ಪ್ರಣಯ್ ಡಿಲೀಟ್ ಮಾಡಿದ್ದಾರೆ. ಆದರೆ ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್ ಅನ್ನು ವಶಪಡಿಸಿಕೊಂಡಿದ್ದಾರೆ.
ಯೂಟ್ಯೂಬರ್‌ನ ರಕ್ತದ ಮಾದರಿ ಹಾಗೂ ಆಹಾರದ ಮಾದರಿಯನ್ನು ಪರೀಕ್ಷೆಗಾಗಿ ಫೋರೆನ್ಸಿಕ್ಗೆ ಕಳುಹಿಸಲಾಗಿದೆ. ನವಿಲು ಮಾಂಸ ತಿಂದಿರುವುದು ದೃಢವಾದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…