ಹಾವೇರಿ : ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇದೇ 2ರಂದು ಮೃತಪಟ್ಟಿರುವ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ಸ್ವಗ್ರಾಮ ರಾಣಿಬೆನ್ನೂರು ತಾಲೂಕು ಚಳಗೇರಿಗೆ ಆಗಮಿಸಿದ್ದು, ಕುಟುಂಬಸ್ಥರರಿಂದ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನವೀನ್ ಪಾರ್ಥಿವ ಶರೀರವನ್ನು ಚಳಗೇರಿಯ ನಿವಾಸಕ್ಕೆ ತಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ ನೆರವೇರಿಸಲಾಗುತ್ತಿದ್ದು ಬಳಿಕ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ.
ಕುಟುಂಬಸ್ಥರ ಆಕ್ರಂದನ
ನವೀನ್ ಮೃತಪಟ್ಟು 21 ದಿನಗಳ ಬಳಿಕ ಪಾರ್ಥಿವ ಶರೀರ ಮನೆಗೆ ಆಗಮಿಸಿದ್ದು, ನವೀನ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ಮಡುಕಟ್ಟಿದ್ದು, ಗ್ರಾಮಸ್ಥರೆಲ್ಲರು ನವೀನ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ.
ದೇಹದಾನಕ್ಕೆ ನಿರ್ಧಾರ
ಅಂತಿಮ ದರ್ಶನದ ಬಳಿಕ ಚಳಗೇರಿ ಗ್ರಾಮದಲ್ಲಿ ನವೀನ್ ಮೆರವಣಿಗೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇಡಿ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಗುತ್ತದೆ. ನವೀನ್ ದೇಹದಾನಕ್ಕೆ ಪೋಷಕರು ನಿರ್ಧರಿಸಿರುವಂತೆ ಮೆರವಣಿಗೆ ಬಳಿಕ ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ನವೀನ್ ದೇಹವನ್ನು ಹಸ್ತಾಂತರ ಮಾಡಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…