Featured

ದೇಶದಾದ್ಯಂತ ನವೆಂಬರ್‌ 1 ಅನ್ನು ಕನ್ನಡ ದಿನವಾಗಿ ಆಚರಿಸಬೇಕು : ಎಚ್​.ಡಿ.ಕುಮಾರಸ್ವಾಮಿ -Vishwanews24

ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು : ಎಚ್​.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು: ಇಂದು ಹಿಂದಿ ದಿವಸ್​. ಹಿಂದಿ ಹೇರಿಕೆ ಕುರಿತಂತೆ ಇದಾಗಲೇ ಕೆಲವರು ಪ್ರತಿಭಟನೆಗೆ ಇಳಿದಿದ್ದಾರೆ. ಅದೇ ರೀತಿ ಇವತ್ತು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರೂ ಹಿಂದಿ ದಿವಸ್​ ಹಾಗೂ ಹಿಂದಿ ಹೇರಿಕೆ ವಿರುದ್ಧ ಸರಣಿ ಟ್ವೀಟ್​ ಮಾಡಿದ್ದಾರೆ.

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು ಎಂದು ಹೇಳಿದ್ದಾರೆ.

 

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿನ ದಿವಸ್​ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು. ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ ಅವರು ಈ ದಿನದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago