Featured

ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ : ರಾಮಲಿಂಗಾ ರೆಡ್ಡಿ – viswhanews24

ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ: ರಾಮಲಿಂಗಾ ರೆಡ್ಡಿ

ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಡಿಸಿಎಂ ಡಿಕೆಶಿ ಬಣದ ಶಾಸಕರು ದೆಹಲಿ ಯಾತ್ರೆ ವಿಚಾರ ಕುರಿತು ರಾಮನಗರದಲ್ಲಿ  ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ಗೊತ್ತಿಲ್ಲ. ದೆಹಲಿಯಲ್ಲಿ ಏನೇನು ಆಗಿದ್ಯೋ ನಮಗೆ ಗೊತ್ತಿಲ್ಲ. ನಿಮಗೆ ಸಂಪೂರ್ಣ ಮಾಹಿತಿ ಬೇಕಿದ್ರೆ ಡಿಕೆಶಿ, ಡಿ.ಕೆ.ಸುರೇಶ್ ಜೊತೆ ಮಾತನಾಡಿ. ನಾಯಕತ್ವ ಬದಲಾವಣೆ ಬಗ್ಗೆ ನನಗೇನು ಗೊತ್ತಿಲ್ಲ. ದಲಿತ ಸಚಿವರು ಸಭೆ ಮಾಡಿರೋದು ನನಗೆ ಗೊತ್ತಿಲ್ಲ. ಏನೂ ನಾಲ್ಕು ಜನ ಊಟಕ್ಕೆ ಸೇರಿಕೊಂಡ್ರೆ ಅದರ ಬಗ್ಗೆ ಮಾತನಾಡಲು ಆಗುತ್ತಾ? ಡಿನ್ನರ್ ಪಾಲಿಟಿಕ್ಸ್ಗೆ ನನ್ನನ್ನು ಯಾರೂ ಕರೆಯುತ್ತಿಲ್ಲ. ನಾನು ಯಾವ ಬಣವೂ ಅಲ್ಲ, ಕಾಂಗ್ರೆಸ್ ಬಣ. ಸರ್ಕಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್ ತೀರ್ಮಾನಕ್ಕೆ ಬಿಡಬೇಕು ಎಂದರು.

ನಮ್ಮಲ್ಲಿ ಬಿಜೆಪಿಯಲ್ಲಿದ್ದಷ್ಟು ಬಣ ಇಲ್ಲ, ಬಿಜೆಪಿಯಲ್ಲಿ ನಾಲ್ಕೈದು ಬಣ ಇದೆ. ನಮ್ಮಲ್ಲಿ ಒಂದೇ ಬಣ ಕಾಂಗ್ರೆಸ್ ಬಣ. ನಮ್ಮಲ್ಲಿ ಹತ್ತಾರು ಹಿರಿಯ ನಾಯಕರು ಇದ್ದಾರೆ. ನಮ್ಮ ಪಕ್ಷ ಸದೃಢವಾಗಿದೆ. ಸರ್ಕಾರ ಎರಡೂವರೆ ವರ್ಷ ಪೂರೈಸಿದೆ. ಇದು ಸೆಕೆಂಡ್ ಇನ್ನಿಂಗ್ಸ್ ಅಂತ ಏನಿಲ್ಲ, ಐದು ವರ್ಷ ಒಂದೇ ಇನ್ನಿಂಗ್ಸ್. ಐದು ವರ್ಷವೂ ಸರ್ಕಾರ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡಲಿದೆ. ಜನರಿಗೆ ಕೊಟ್ಟ ಭರವಸೆಗಳನ್ನ ಈಡೇರಿಸಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago