ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯ : ಡಾ.ಕೆ. ಸುಧಾಕರ್ -Vishwanews24
ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯ : ಡಾ.ಕೆ. ಸುಧಾಕರ್ -Vishwanews24
ನವದೆಹಲಿ : ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದ ಮಕ್ಕಳ ಪೋಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಕೇಂದ್ರ ಸರ್ಕಾರವು ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿರುವ ಜೈಡಸ್ ಕ್ಯಾಡಿಲಾ ಸಂಸ್ಥೆಯೊಂದಿಗೆ ಬೆಲೆ ನಿಗದಿ ಕುರಿತಾಗಿ ಅಂತಿಮ ಮಾತುಕತೆ ನಡೆಸುತ್ತಿದೆ. ನವೆಂಬರ್ ವೇಳೆಗೆ ಭಾರತ್ ಬಯೋಟೆಕ್ ಲಸಿಕೆಗೆ ಅನುಮತಿ ಸಿಗಬಹುದು ಎಂದು ಹೇಳಿದ್ದಾರೆ.
ಉಡುಪಿ: ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಕೋವಿಡ್ ಲಸಿಕೆ ವಿತರಣೆ -Vishwanews24
ಮೂಗಿನ ಮೂಲಕ ಪಡೆಯುವ ವ್ಯಾಕ್ಸಿನ್ ಬಗ್ಗೆ ಸಹ ಚರ್ಚೆ ನಡೆದಿದ್ದು, ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ರಾಜ್ಯದಲ್ಲೂ ಕೊರೊನಾ ಲಸಿಎಕ ಸಿಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ 1.48 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ. 18 ಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೊರೊನಾ ಲಸಿಕೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರವೇ ಇದಕ್ಕೆ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
