ಬೆಂಗಳೂರು : ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ದಿನದಿಂದ ಬಿಬಿಎಂಪಿ ವ್ಯಾಪ್ತಿಯ ಉದ್ದಿಮೆ, ಮಾಲ್, ಹೋಟೆಲ್ ಮಳಿಗೆಗಳು ಸೇರಿದಂತೆ ಎಲ್ಲ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೌತಮ್ ಕುಮಾರ್, ನವೆಂಬರ್ 1 ರಿಂದ ನಗರಾದ್ಯಾಂತ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು, ಒಂದು ವೇಳೆ ಕನ್ನಡ ನಾಮಫಲಕ ಹಾಕದ ಮಳಿಗೆಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನವೆಂಬರ್ ತಿಂಗಳಾದ್ಯಂತ ಬೆಂಗಳೂರು ನಗರದಲ್ಲಿರುವ ಎಲ್ಲ ಮಳಿಗೆಗಳ ಮೇಲೆ ಕನ್ನಡ ನಾಮಫಲಕ ಹಾಕಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಬಿಎಂಪಿ ಸಿದ್ದಪಡಿಸಿದ ಹೊಸ ಹೊರಾಂಗಣ ಮತ್ತು ಸಾರ್ವಜನಿಕ ಸಂದೇಶ ನಾಮಫಲಕದಲ್ಲಿ ಶೇ. 60 ರಷ್ಟು ಜಾಗದಲ್ಲಿ ಕನ್ನಡ ಕಡ್ಡಾಯ ನಿಯಮ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…