ನವೆಂಬರ್ 14 ರಂದು ಉಚ್ಚಿಲದಲ್ಲಿ ಉಡುಪಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ ಹಾಗೂ ಸಹಕಾರಿ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ: vishwanews24
ನವೆಂಬರ್ 14 ರಂದು ಉಚ್ಚಿಲದಲ್ಲಿ ಉಡುಪಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ ಹಾಗೂ ಸಹಕಾರಿ ರತ್ನ ಡಾ ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ: vishwanews24
ಉಡುಪಿಯ ಸಹಕಾರಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಣಯ
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ,ಉಡುಪಿ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ. 2022 ರ ಉದ್ಘಾಟನೆ ಹಾಗೂ ಸಹಕಾರ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಇವರಿಗೆ ಅಭಿನಂದನಾ ಸಮಾರಂಭ ಉಚ್ಚಿಲದಲ್ಲಿ ನವೆಂಬರ್ 14 ರಂದು ನಡೆಯಲಿದೆ ಎಂದು ಉಡುಪಿಯಲ್ಲಿ ನಡೆದ ಸಹಕಾರಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಿದರು.

ಅದೇ ದಿನ ಉಡುಪಿಯಿಂದ ಉಚ್ಚಿಲದವರೆಗೆ ಸಹಕಾರಿಗಳ ಬೈಕ್ ರ್ಯಾಲಿ ನಡೆಸುವ ಬಗ್ಗೆ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಸಹಕಾರಿ ಸಂಘಗಳ ಉಪನಿಬಂಧಕ ಲಕ್ಷ್ಮೀ ನಾರಾಯಣ ಜಿ.ಎನ್ , ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳದ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಮಹಾಲಕ್ಷ್ಮಿ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಸುವರ್ಣ,ಹರೀಶ್ ಕಿಣಿ,ರವಿರಾಜ್ ಹೆಗ್ಡೆ,ಕಟಪಾಡಿ ಶಂಕರ ಪೂಜಾರಿ, ಅನಿಲ್ ಕುಮಾರ್,ಪಡುಬಿದ್ರಿ ಸುಧಿರ್ ಕುಮಾರ್ ವೈ,ಮೊದಲಾದವರು ಉಪಸ್ಥಿತರಿದ್ದರು.


