Featured

ನವೆಂಬರ್14 ರಂದು ಉಚ್ಚಿಲದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ ಮತ್ತು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ : vishwanews24

ನವೆಂಬರ್14 ರಂದು ಉಚ್ಚಿಲದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ ಮತ್ತು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಇಂದಿನಿಂದ ಸಹಕಾರಿ ರಥದ ತಿರುಗಾಟಕ್ಕೆ ಚಾಲನೆ

ಸಹಕಾರಿಗಳಿಂದ ಬೃಹತ್ ವಾಹನ ಜಾಥ

ಎಲ್ಲಾ ಸಹಕಾರಿಗಳ ಶರ್ಟ್ ನ ಹೃದಯಭಾಗದಲ್ಲಿ ಸಹಕಾರಿ ಪಿನ್

ಉಡುಪಿ: ಕರ್ನಾಟಕ ರಾಜ್ಯ ಸರಕಾರ ಮಹಾಮಂಡಳ ನಿ., ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ ಉಡುಪಿ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 14 ರಿಂದ 20 ರವರೆಗೆ ಉಡಪಿ ಜಿಲ್ಲೆಯಾದ್ಯಂತ ನಡೆಯುವ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮಗಳ ಮಾಹಿತಿಯನ್ನು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದರು.

 

ದಿನಾಂಕ:14.11.2022ನೇ ಸೋಮವಾರ ಸಹಕಾರ ರತ್ನ ಡಾ|ಎಂ.ಎನ್.ರಾಜೇಂದ್ರಕುಮಾರ್ ರವರ ಅಭಿನಂದನಾ ಕಾರ್ಯಕ್ರಮ ಮತ್ತು ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ “ಸಹಕಾರ ಸಂಸ್ಥೆಗಳಲ್ಲಿ ವ್ಯಾಪಾರ ಸರಳೀಕರಣ, ರಫ್ತು ವೃದ್ಧಿಗಾಗಿ ಜೆಮ್-ಪೋರ್ಟಲ್ ಬಳಕೆ” ದಿನವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ, ಮಂಗಳೂರು, ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ದ.ಕ ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಿ.,ಮಂಗಳೂರು, ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನಿ.,ಉಡುಪಿ ಹಾಗೂ ಉಡುಪಿ ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕುಗಳು, ಸಹಕಾರ ಇಲಾಖೆ ಉಡುಪಿ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರ ಸಂಘಗಳ / ಸೌಹಾರ್ದ ಸಹಕಾರಿಗಳ ನೇತೃತ್ವದೊಂದಿಗೆ ಸನ್ಮಾನ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪೇಜಾವರ ಮಠ, ಉಡುಪಿರವರ ಆಶೀರ್ವಚನದೊಂದಿಗೆ, ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ, ಬೆಂಗಳೂರು, ಅಧ್ಯಕ್ಷರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ, ಮಂಗಳೂರು ಇವರು ಉದ್ಘಾಟಿಸಲಿದ್ದು, ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷರು, ಜಿಲ್ಲಾ ಸಹಕಾರಿ ಯೂನಿಯನ್ ನಿ., ಉಡುಪಿ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ಶೋಭಾ ಕರಂದ್ಲಾಜೆ, ಮಾನ್ಯ ಕೃಷಿ ಮತ್ತು ರೈತರ ಕಲ್ಯಾಣ ಇಲಾಖಾ ರಾಜ್ಯ ಸಚಿವೆ, ಭಾರತ ಸರ್ಕಾರ, ಶ್ರೀ ಬಿ.ವೈ ರಾಘವೇಂದ್ರ, ಸಂಸದರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಶ್ರೀ ಎಸ್‌.ಅಂಗಾರ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಇಲಾಖೆ, ಕರ್ನಾಟಕ ಸರ್ಕಾರ, ಶ್ರೀ ವಿ. ಸುನಿಲ್ ಕುಮಾರ್, ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರು, ಕರ್ನಾಟಕ ಸರ್ಕಾರ, ಶ್ರೀ ಕೋಟ ಶ್ರೀನಿವಾಸ ಪೂಜಾರಿ,ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಕರ್ನಾಟಕ ಸರ್ಕಾರ, ಡಾ|ಜಿ.ಶಂಕರ್, ಶಂಕರ್ ಫ್ಯಾಮಿಲಿ ಟ್ರಸ್ಟ್, ಅಂಬಲಪಾಡಿ, ಶ್ರೀ ಕೆ.ರಘುಪತಿ ಭಟ್, ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ, ಶ್ರೀ ಲಾಲಾಜಿ ಮೆಂಡನ್, ಮಾನ್ಯ ಶಾಸಕರು, ಕಾಪು ವಿಧಾನಸಭಾ ಕ್ಷೇತ್ರ, ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮಾನ್ಯ ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ, ಶ್ರೀ ಸುಕುಮಾರ್ ಶೆಟ್ಟಿ, ಮಾನ್ಯ ಶಾಸಕರು, ಬೈಂದೂರು ವಿಧಾನಸಭಾ ಕ್ಷೇತ್ರ, ಶ್ರೀ ಮಂಜುನಾಥ ಭಂಡಾರಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು, ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ, ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಶ್ರೀ ವಿನಯ ಕುಮಾರ್ ಸೊರಕೆ, ಮಾಜಿ ಸಚಿವರು, ಕರ್ನಾಟಕ ಸರ್ಕಾರ, ಡಾ. ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ, ಬೆಂಗಳೂರು, ಶ್ರೀ ಯಶ್‌ಪಾಲ್ ಸುವರ್ಣ, ಅಧ್ಯಕ್ಷರು, ದ.ಕ ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಿ., ಶ್ರೀ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಅಧ್ಯಕ್ಷರು, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ಐಕಳ ಹರೀಶ್ ಶೆಟ್ಟಿ, ಅಧ್ಯಕ್ಷರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ರಿ., ಮಂಗಳೂರು, ಶ್ರೀ ಮಂಜುನಾಥ ಎಸ್‌.ಕೆ, ನಿರ್ದೆಶಕರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ, ಬೆಂಗಳೂರು, ಶ್ರೀ ಕೆ.ಪಿ ಸುಚರಿತ ಶೆಟ್ಟಿ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿರುವರು ಎಂದರು.

 

 

ನವಂಬರ್ 14 ರಂದು ಬೆಳಿಗ್ಗೆ ಉಡುಪಿ ಜಿಲ್ಲೆಯ 800ಕ್ಕೂ ಮೇಲ್ಪಟ್ಟ ಸಹಕಾರ ಸಂಸ್ಥೆಗಳವರು ಬೆಳಿಗ್ಗೆ 7.30ಕ್ಕೆ ಸಹಕಾರ ಧ್ವಜಾರೋಹಣ ಮಾಡಿ, ಆಯಾ ಸಂಘದ ಅಧ್ಯಕ್ಷರು, ನಿರ್ದೇಶಕರು ಮತ್ತು ನೌಕರರು ಸೇರಿ ಅವರವರ ಸಂಸ್ಥೆಗಳಲ್ಲಿ ಸಹಕಾರ ಗೀತ ಮತ್ತು ನಾಡಗೀತೆಯನ್ನು ಹಾಡಿ ಪ್ರತಿಯೊಂದು ಸಹಕಾರ ಸಂಸ್ಥೆಯವರು ಅವರವರ ಸಂಸ್ಥೆಗಳಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡುವವರಿದ್ದಾರೆ.

ಆನಂತರ ಸಮಸ್ತ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ನೌಕರರು ದ್ವಿ-ಚಕ್ರ ವಾಹನ ಮತ್ತು ನಾಲ್ಕು ಚಕ್ರ ವಾಹನಗಳಲ್ಲಿ ಸಹಕಾರ ಧ್ವಜವನ್ನು ಕಟ್ಟಿಕೊಂಡು ಶಿರೂರು-ಬೈಂದೂರು-ಕುಂದಾಪುರ-ಬ್ರಹ್ಮಾವರ-ಉಡುಪಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯ ಉದ್ಯಾವರ ತಲುಪುವವರಿದ್ದಾರೆ ಉದ್ಯಾವರದಲ್ಲಿ 9.00ಕ್ಕೆ ಸರಿಯಾಗಿ ಸರ್ವ ಸಹಕಾರಿಗಳಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ತದನಂತರ ವಾಹನಗಳ ಜಾಥದೊಂದಿಗೆ ಸಹಕಾರಿಗಳು ಶಿಸ್ತು ಬದ್ದರಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಳೂರು ತಲುಪುವವರಿದ್ದಾರೆ. ಕಾರ್ಕಳ ತಾಲೂಕಿನ ಸಮಸ್ತ ಸಹಕಾರಿಗಳು ಬೆಳಣ್ ಮಾರ್ಗವಾಗಿ ಉಚ್ಚಿಲದ ಸಭಾಂಗಣಕ್ಕೆ ತಮ್ಮ ದ್ವಿ-ಚಕ್ರ ಮತ್ತು ನಾಲ್ಕು ಚಕ್ರ ವಾಹನದೊಂದಿಗೆ ಮತ್ತು ಜಿಲ್ಲೆಯ ಸಮಸ್ತ ನವೋದಯ ಸ್ವ-ಸಹಾಯ ಸದಸ್ಯರು ಉಚ್ಚಿಲದ ಶ್ರೀಮತಿ ತುಂಬೆ ಕರ್ಕೇರ ಸಭಾಭವನದಲ್ಲಿ ಸೇರುವವರಿದ್ದಾರೆ ಅಲ್ಲಿ ಉಪಾಹಾರ ಪೂರೈಸಿ ಮೆರವಣಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮುಳೂರಿನಲ್ಲಿ ಬೆಳಿಗ್ಗೆ 10 ಗಂಟೆಗೆ ಉಡುಪಿಯಿಂದ ಹೊರಟ ಮೆರವಣಿಗೆಯೊಂದಿಗೆ ಸೇರಿಕೊಳ್ಳುವವರಿದ್ದಾರೆ ಅಲ್ಲಿಂದ ಹತ್ತಾರು ಸಹಕಾರಿ ಸ್ತಬ್ಧ ಚಿತ್ರಗಳು ಮತ್ತು ಅವರೊಂದಿಗೆ ಸಮಸ್ತ ಸಹಕಾರಿಗಳು ವಾಹನ ಜಾಥ ಮತ್ತು ಮೆರವಣಿಗೆಯ ಮೂಲಕ ಸಮಸ್ತ ಸಹಕಾರಿಗಳನ್ನು ಕರೆತರಲಾಗುವುದೆಂದರು.

69 Sahakara Sapthaha proof 01

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.ಬೆಂಗಳೂರು ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ , ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್ ನಿ ಮಂಗಳೂರು ,ಯಶ್ಪಾಲ್ ಸುವರ್ಣ, ಅಧ್ಯಕ್ಷರು ದ.ಕ ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಿ ಮಂಗಳೂರು, ಕಾರ್ಯನಿರ್ವಾಣಧಿಕಾರಿ ಹರೀಶ್ ಕಿಣಿ,ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾದ ರಾಜೇಶ್ ರಾವ್ ಪಾಂಗಾಳ,ಅಶೋಕ್ ಶೆಟ್ಟಿ, ಪಡುಬಿದ್ರಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಿರ್ ಕುಮಾರ್ ವೈ,ಶ್ರಿಧರ್ ಪಿ.ಎಸ್ ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

15 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

17 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

17 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

18 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

18 hours ago