Featured

ನವೋದಯ’ ಆ್ಯಪ್ ಮತ್ತು ತಂತ್ರಾಂಶದ ಮೂಲಕ ಮನೆ ಬಾಗಿಲಿಗೇ ಮಾಸಾಶನ ಅಭಿಯಾನ‌ಕ್ಕೆ ಮುಖ್ಯಮಂತ್ರಿ ಚಾಲನೆ-Vishwanews24

ನವೋದಯ’ ಆ್ಯಪ್ ಮತ್ತು ತಂತ್ರಾಂಶದ ಮೂಲಕ ಮನೆ ಬಾಗಿಲಿಗೇ ಮಾಸಾಶನ ಅಭಿಯಾನ‌ಕ್ಕೆ ಮುಖ್ಯಮಂತ್ರಿ ಚಾಲನೆ-Vishwanews24

ಬೆಂಗಳೂರು: ‘ಮನೆ ಬಾಗಿಲಿಗೇ ಮಾಸಾಶನ’ ಅಭಿಯಾನದ ಮೂಲಕ ಫಲಾನುಭವಿಗಳ ಮನೆಗೆ ಪಿಂಚಣಿ ತಲುಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಅರ್ಹ ಫಲಾನುಭವಿಗಳನ್ನು ‘ನವೋದಯ’ ಆ್ಯಪ್ ಮತ್ತು ತಂತ್ರಾಂಶದಲ್ಲಿ ಗುರುತಿಸಿ, ಅವರ ಮನೆ ಬಾಗಿಲಲ್ಲೇ ಪಿಂಚಣಿ ಮಂಜೂರಾತಿ ಮಾಡುವ ಅಭಿಯಾನ‌ಕ್ಕೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬುಧವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಮಧ್ಯವರ್ತಿಗಳ ಹಾವಳಿ ಇಲ್ಲದೆ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು. ಇದು ಪ್ರಧಾನಿ ನರೇಂದ್ರ ಮೋದಿಯವರ ಆಶಯ ಕೂಡ. ಇಷ್ಟು ದಿನ ಪಿಂಚಣಿಗಾಗಿ ಫಲಾನುಭವಿಗಳು ತುಂಬಾ ಕಷ್ಟ ಪಡುತ್ತಿದ್ದರು. ಇದೀಗ ಅದನ್ನು ತಪ್ಪಿಸಲು ಸರ್ಕಾರ ಮಹತ್ವದ ಯೋಜನೆ ಜಾರಿ ಮಾಡಿದೆ’ ಎಂದರು.

ಕೆಂಪು ಕೋಟೆ ಹಿಂಸಾಚಾರ : ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ : ಹೆಚ್‌.ಡಿ.ಕುಮಾರಸ್ವಾಮಿ -Vishwanews24

‘ಪಿಂಚಣಿಗಾಗಿ ಜನರು ಸರ್ಕಾರಿ ಕಚೇರಿಗೆ ಹೋಗಿ, ಅಧಿಕಾರಿಗಳ ಬಳಿ ಕೈ ಕಟ್ಟಿ ನಿಲ್ಲುವ ಪರಿಸ್ಥಿತಿ ಇತ್ತು. ಅದೆಲ್ಲವನ್ನೂ ತಪ್ಪಿಸಲುಈ ಯೋಜನೆ ಸಹಕಾರಿಯಾಗಲಿದೆ. ಇನ್ನು ಮುಂದೆ ಮಧ್ಯವರ್ತಿಗಳು ಇಲ್ಲದೇ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೇರವಾಗಿ ಅವರ ಬ್ಯಾಂಕ್‌ ಖಾತೆಗೆ ತಲುಪಲಿದೆ’ ಎಂದರು.

‘ಮೊದಲ ಹಂತದಲ್ಲಿ ವೃದ್ಧಾಪ್ಯ ವರ್ಗಕ್ಕೆ ಯೋಜನೆ ಜಾರಿ ಮಾಡಲಾಗಿದೆ. ಎರಡನೇ ಹಂತದಲ್ಲಿ ವಿಧವೆಯರು, ಅಂಗವಿಕಲರು ಸೇರಿದಂತೆ ಉಳಿದ ಎಲ್ಲ ಪಿಂಚಣಿದಾರರಿಗೆ ಜಾರಿ ಮಾಡಲು ಕ್ರಮ ವಹಿಸುತ್ತೇವೆ’ ಎಂದರು.

ನಿಜವಾದ ರೈತರು ಹಿಂಸಾಚಾರ ನಡೆಸಲು ಸಾಧ್ಯವಿಲ್ಲ : ಶೋಭಾ ಕರಂದ್ಲಾಜೆ -Vishwanews24

 

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago