Featured

ನವ ದುರ್ಗೆಯರ ಶಕ್ತಿ ಮುಂದಿನ 9 ವರ್ಷ ನಮ್ಮ ಸರ್ಕಾರದ ಮೇಲೆ ಇರುತ್ತದೆ ಎಂಬುದು ನನ್ನ ನಂಬಿಕೆ : ಡಿ.ಕೆ.ಶಿವಕುಮಾರ್ – vishwanews24

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ : ಡಿ.ಕೆ.ಶಿವಕುಮಾರ್

ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು “ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌. ಅದರಂತೆ ಉತ್ತಮ ಮಳೆ ಬಂದು ನಾನು ಮತ್ತು ಮುಖ್ಯಮಂತ್ರಿ ಇಬ್ಬರೂ ರಾಜ್ಯದ ನಾಲ್ಕು ಅಣೆಕಟ್ಟುಗಳಿಗೆ ಬಾಗಿನ ಅರ್ಪಿಸಿದ್ದೇವೆ” ಎಂದರು.

ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಬಂದು ಕಳೆದ ವರ್ಷ ದೇವಿಗೆ ಗೃಹಲಕ್ಷ್ಮಿ ಹಣದ 2 ಸಾವಿರ ಹಾಗೂ ಒಂದು ವರ್ಷದ ಹಣವನ್ನು ಕಾಣಿಕೆ ಸಲ್ಲಿಸಿದ್ದೆವು.” ಎಂದು ಹೇಳಿದರು. ಕಳೆದ ವರ್ಷ ನಾಡಿನ ಸಾಂಸ್ಕೃತಿಕ ಹೆಗ್ಗುರುತು ಹಂಸಲೇಖ ಅವರಿಂದ ಉದ್ಘಾಟನೆ ನೆರವೇರಿಸಲಾಗಿತ್ತು. ಈ ವರ್ಷ ಸಾಹಿತ್ಯ ಲೋಕದ ಪೈಲ್ವಾನ್ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ ನೆರವೇರಿಸಿರುವುದು ಹೆಚ್ಚು ಸಂತಸ ನೀಡಿದೆ” ಎಂದು ಹೇಳಿದರು.

ನವರಾತ್ರಿ ಎಂದರೆ ಒಂಬತ್ತು ದಿನ. ಈ ಒಂಬತ್ತು ದಿನವೂ ದೇವಿಯ ನಾನಾ ಅವತಾರಗಳನ್ನು ಪೂಜೆ ಮಾಡುತ್ತೇವೆ. ನವ ದುರ್ಗೆಯರ ಶಕ್ತಿ ಮುಂದಿನ 9 ವರ್ಷಗಳ ನಮ್ಮ ಸರ್ಕಾರದ ಮೇಲೆ ಇರುತ್ತದೆ ಎಂಬುದು ನನ್ನ ಅಚಲ ನಂಬಿಕೆ” ಎಂದರು.

ಮೈಸೂರಿನಲ್ಲಿ ಚಾಮುಂಡೇಶ್ವರಿ, ಉತ್ತರ ಕರ್ನಾಟಕದಲ್ಲಿ ಬನಶಂಕರಿ, ಕರಾವಳಿಯಲ್ಲಿ ದುರ್ಗಾಪರಮೇಶ್ವರಿ, ಮಲೆನಾಡಿನಲ್ಲಿ ಸಿಗಂದೂರೇಶ್ವರಿ, ಬೆಂಗಳೂರಿನಲ್ಲಿ ಅಣ್ಣಮ್ಮ , ನಮ್ಮ ಊರಿನಲ್ಲಿ ಕೆಂಕೇರಮ್ಮ, ಕಬ್ಬಾಳಮ್ಮ ಹೀಗೆ ರಾಜ್ಯದ ಅಷ್ಟ ದಿಕ್ಕುಗಳಲ್ಲೂ ನೆಲೆಸಿರುವ ತಾಯಂದಿರು ನಮ್ಮನ್ನು ಕಾಪಾಡುತ್ತಿದ್ದಾರೆ ಎಂದು ಹೇಳಿದರು.

ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನೆಪು ಜ್ಞಾನದ ಮೂಲ, ದೇವರ ದಸರಾ ಶಕ್ತಿ ಹಬ್ಬ, ವಿಜಯದ ಹಬ್ಬ, ಕರ್ನಾಟಕದ ಸಂಸ್ಕೃತಿ ಸಾರುವ ಹಬ್ಬ. ಭಕ್ತಿಯ ಮೂಲ ಇವೆಲ್ಲಾ ಮನುಷ್ಯತ್ವಕ್ಕೆ ಮೂಲ. ಮನುಷ್ಯತ್ವ ಮೋಕ್ಷಕ್ಕೆ ಮೂಲ. ದಸರಾ ಶಕ್ತಿ ಹಬ್ಬ, ವಿಜಯದ ಹಬ್ಬ, ಕರ್ನಾಟಕದ ಸಂಸ್ಕೃತಿ ಸಾರುವ ಹಬ್ಬ” ಎಂದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

26 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

40 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

1 hour ago