ಮಂಗಳೂರು: ಮಂಗಳೂರು ವಿದೇಶಿ ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ, ಒಂದೇ ವಾರದಲ್ಲಿ ವಿದೇಶದ ಪ್ರವಾಸಿಗರನ್ನು ಹೊತ್ತ 2 ನೇ ಬೃಹತ್ ಹಡಗು ಕರ್ನಾಟಕ ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವಮಗಳೂರು ಬಂದರಿಗೆ ಆಗಮಿಸಿದೆ.
ಪ್ರಸಕ್ತ ಋತುವಿನ ಎರಡನೇ ಕ್ರೂಸ್ ಹಡಗು ‘ಸೆವೆನ್ ಸೀಸ್ ಎಕ್ಸ್‌ಪ್ಲೋರರ್’ನ ಪ್ರವಾಸಿಗರನ್ನು ಮತ್ತು ಸಿಬಂದಿ ವರ್ಗವನ್ನು ಎನ್‌ಎಂಪಿಎ ಮತ್ತು ಎಂಪಿಎ ಅಧ್ಯಕ್ಷ ಡಾ. ಎ.ವಿ. ರಮಣ ಅವರು ಬಂದರಿಗೆ ಆತ್ಮೀಯವಾಗಿ ಸ್ವಾಗತಿಸಿದರು.
ಈ ಐಶರಾಮಿ ಹಡಗಿನಲ್ಲಿ 686 ಪ್ರಯಾಣಿಕರು ಮತ್ತು 552 ಸಿಬ್ಬಂದಿಗಳು ಇದ್ದಾರೆ.
ಪ್ರವಾಸಿಗರು ಮಂಗಳೂರು ಮತ್ತು ಸುತ್ತಮುತ್ತಲಿನ ವಿವಿಧ ಪ್ರವಾಸಿ ತಾಣಗಳಾದ ಸೇಂಟ್ ಅಲೋಶಿಯಸ್, ಕದ್ರಿ ದೇವಸ್ಥಾನ, ಕುದ್ರೋಳಿ ದೇವಸ್ಥಾನ, ಸ್ಥಳೀಯ ಮಾರುಕಟ್ಟೆ, ಗೋಡಂಬಿ ಕಾರ್ಖಾನೆ, ಕಾರ್ಕಳ ಗೋಮಟೇಶ್ವರ ಪ್ರತಿಮೆ, ಮೂಡಬಿದ್ರಿ ಸಾವಿರ ಕಂಬದ ಬಸದಿ, ಸೇಂಟ್ ಅಲೋಶಿಯಸ್ ಚಾಪೆಲ್ ಮತ್ತು ಫೋರಂ ಫಿಜಾ ಮಾಲ್ ಗೆ ಭೇಟಿ ನೀಡಿದರು.
ಪ್ರವಾಸಿಗರಿಗೆ ಕರಾವಳಿಯ ಯಕ್ಷಗಾನ ಮತ್ತು ಸಾಂಪ್ರದಾಯಿಕ ಡೋಲು (ಚಂಡೆ) ಮುಂತಾದ ಸಾಂಪ್ರದಾಯಿಕ ಜಾನಪದದ ಶೈಲಿಯಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು.
ಕ್ರೂಸ್ ಪ್ರಯಾಣಿಕರ ಸೌಕರ್ಯ ಮತ್ತು ಉತ್ತಮ ಅನುಭವಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಕ್ಷಿಪ್ರ ಸಂಚಾರಕ್ಕಾಗಿ ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಅಂಗಡಿಗಳು, ಸ್ಥಳೀಯ ಮಾರುಕಟ್ಟೆಗೆ ಭೇಟಿ ನೀಡುವ ಪ್ರವಾಸಿಗರಿಗೆ 02 ಶಟಲ್ ಬಸ್ ಸೇರಿದಂತೆ 25 ಕೋಚ್‌ಗಳು ಮತ್ತು ಟ್ಯಾಕ್ಸಿಗಳು, ಪ್ರವಾಸಿ ವ್ಯಾನ್‌ಗಳು, ಆಯುಷ್ ಇಲಾಖೆಯಿಂದ ಧ್ಯಾನ ಕೇಂದ್ರವನ್ನು ಸಿದ್ಧಪಡಿಸಲಾಗಿತ್ತು.
ಪ್ರವಾಸಿಗರಿಗೆ ಸ್ಥಳೀಯ ಜಾನಪದ ಮತ್ತು ಪ್ರದೇಶದ ಸಂಪ್ರದಾಯಗಳನ್ನು ಪರಿಚಯಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.
ನೌಕಾಯಾನದ ಪ್ರವಾಸಿಗರು ತಮ್ಮ ಹಡಗಿಗೆ ಮರಳುತ್ತಿರುವಾಗ ಮಂಗಳೂರಿಗೆ ಭೇಟಿ ನೀಡಿದ ಸವಿನೆನಪಿಗಾಗಿ ಬಂದರಿನಿಂದ ಸ್ಮರಣಿಕೆಗಳನ್ನು ನೀಡಲಾಯಿತು.
ಹಡಗು ತನ್ನ ಮುಂದಿನ ತಾಣವಾದ ಮಾಲೆಗೆ ಸಂಜೆ ಆರು ಗಂಟೆ ಸುಮಾರಿಗೆ ಪ್ರಯಾಣ ಬೆಳೆಸಿತು.
ಈ ಐಶಾರಾಮಿ ಕ್ರೂಸ್ ಹಡಗು “ಸೆವೆನ್ ಸೀಸ್ ಎಕ್ಸ್‌ಪ್ಲೋರರ್” ನ ಒಟ್ಟಾರೆ ಉದ್ದ 223.74 ಮೀಟರ್ ಮತ್ತು 55,254 ಒಟ್ಟು ಟನ್ನೇಜ್ 7 ಮೀಟರ್ Draft ಸಾಮರ್ಥ್ಯವನ್ನು ಹೊಂದಿದೆ.
ಮಾಲ್ಡೀವ್ಸ್ ನ ಮಾಲೆಗೆ ಹೋಗುವ ಮಾರ್ಗದಲ್ಲಿ ಹಡಗು ಕತಾರ್ ಬಂದರಿನಿಂದ ಭಾರತಕ್ಕೆ ಬಂದು ಗೋವಾದ ಮರ್ಮುಗೋವಾ ಬಂದರಿನಲ್ಲಿ ನಿಂತು ಅಲ್ಲಿಂದ ಮಂಗಳೂರಿಗೆ ಆಗಮಿಸಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…