Featured

ನಾಗಕ್ಷೇತ್ರ ಕುಕ್ಕೆಯಲ್ಲಿ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ದೊರಕದ ಸ್ಪಂದನೆ  ; ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ – vishwanews24

ನಾಗಕ್ಷೇತ್ರದಲ್ಲಿ ನಾಗನೇ ಸತ್ತು ಬಿದ್ದಾಗ  ಅರ್ಚಕರು ಸಿಗುತ್ತಿಲ್ಲ: ಸಿಬ್ಬಂದಿಗಳ ವಿರುದ್ದ ಆಕ್ರೋಶ

ಪುತ್ತೂರು : ದೇಶದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೃತಪಟ್ಟ ನಾಗರಹಾವಿನ ಅಂತ್ಯಸಂಸ್ಕಾರಕ್ಕೆ ಸ್ಪಂದನೆ ದೊರಕದೆ ಭಕ್ತಾಧಿಗಳು ಮೃತಪಟ್ಟ ನಾಗರಹಾವನ್ನು ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ರಸ್ತೆಯಲ್ಲಿ ವಾಹನದಡಿಗೆ ಬಿದ್ದು ನಾಗರಹಾವೊಂದು ಸಾವನಪ್ಪಿತ್ತು. ಈ ವಿಚಾರವನ್ನು ಸ್ಥಳೀಯರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಗೆ ತಿಳಿಸಿದ್ದರು. ಹಾವು ಸತ್ತ ತಕ್ಷಣ ಅದಕ್ಕೆ ಅಂತ್ಯಸಂಸ್ಕಾರ ಮಾಡಬೇಕು ಎನ್ನುವ ಪದ್ಧತಿ ಇರುವ ಕಾರಣ ದೇವಳದ ಸಿಬ್ಬಂದಿಗಳಿಗೆ ವಿಚಾರವನ್ನು ಸ್ಥಳೀಯರು ತಿಳಿಸಿದ್ದರು. ಆದರೆ ದೇವಾಲಯದ ಸಿಬ್ಬಂದಿ ಹಾವು ಸತ್ತು ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸದೆ ಅಸಡ್ಡೆ ತೋರಿದ್ದಾರೆ.

ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಸಾವನಪ್ಪಿದ ಹಾವನ್ನು ಸೀದಾ ಕುಕ್ಕೆ ದೇವಸ್ಥಾನದ ಆಡಳಿತ ಕಛೇರಿ ಎದುರಿಗಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸರ್ಪಸಂಸ್ಕಾರ ವಿಧಿಗೆ ಹಣ ಕೊಟ್ಟರೆ ಮಾತ್ರ ಅರ್ಚಕರು ಸಿಗುತ್ತಾರೆ, ಆದರೆ ಕ್ಷೇತ್ರದಲ್ಲಿ ಆರಾಧಿಸಲ್ಪಡುವ ನಾಗನೇ ಸತ್ತು ಬಿದ್ದಾಗ ನಿಮಗೆ ಅರ್ಚಕರು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು, ನಾಗದೇವರ ಅನ್ನ ತಿಂದೇ ಇಲ್ಲಿ ಎಲ್ಲರೂ ಬದುಕುತ್ತಿರುವುದು, ಆದರೆ ನಾಗನಿಗೆ ಅಂತ್ಯಸಂಸ್ಕಾರ ನಡೆಸಲು ಮಾತ್ರ ಯಾರೂ ಇಲ್ಲ ಎಂದು ಸಿಬ್ಬಂದಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದೇವಸ್ಥಾನದಲ್ಲಿ ಇಷ್ಟೆಲ್ಲಾ ಸಿಬ್ಬಂದಿಗಳು ಇರೋದು ಯಾಕೆ ಎಂದು ಕ್ಷೇತ್ರದ ಸಿಬ್ಬಂದಿಗಳ ವಿರುದ್ದ ಸ್ಥಳೀಯರು ಹರಿಹಾಯ್ದಿದ್ದಾರೆ.

ಕೊನೆಗೆ ಪುತ್ತೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿದಾಗ ಅವರು ಸ್ಪಂದಿಸಿದ್ದಾರೆ. ಸಹಾಯಕ ಆಯುಕ್ತರ ಆದೇಶದ ಬಳಿಕವೇ ನಾಗನಿಗೆ ಅಂತ್ಯಸಂಸ್ಕಾರ ಅರ್ಚಕರು ನೇರವೇರಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago