Featured

ನಾಗಮಂಗಲ ಗಲಭೆ : ಸಿಎಂ ಕುರ್ಚಿಯಿಂದ‌ ಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷವೇ ನಡೆಸಿರೊ ಷಡ್ಯಂತ್ರ : ಎಚ್‌ಡಿ‌ ಕುಮಾರಸ್ವಾಮಿ – vishwanews24

ನಾಗಮಂಗಲದ ಇಡೀ ಘಟನೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮ : ಎಚ್‌ಡಿ‌ ಕುಮಾರಸ್ವಾಮಿ

ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದ ಗಲಭೆ ವಿಚಾರಕ್ಕೆ ಸಂಬಂಧಿಸಿಂತೆ ಶುಕ್ರವಾರ ಕೇಂದ್ರ ಸಚಿವ ಎಚ್‌ಡಿ‌ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗಮಂಗಲದ ಇಡೀ ಘಟನೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ. 1990ರಲ್ಲಿ ವಿರೇಂದ್ರ ಪಾಟೀಲರನ್ನು ಸಿಎಂ ಕುರ್ಚಿಯಿಂದ ಕೆಳಗೆ ಇಳಿಸಲು ಗಲಭೆ ನಡೆಸಿದಂತೆ ಸಿದ್ದರಾಮಯ್ಯರನ್ನ ಸಿಎಂ ಕುರ್ಚಿಯಿಂದ‌ ಕೆಳಗೆ ಇಳಿಸಲು ಕಾಂಗ್ರೆಸ್‌ನಲ್ಲೇ ನಡೆಸಿರುವ ಸಂಚು ಎಂದು ಹೊಸ ಬಾಂಬ್ ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗದಲ್ಲಿ ನಡೆದಿರುವ ಕೋಮು ದಳ್ಳೂರಿ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಗುರುವಾರವಷ್ಟೆ ಬಿಜೆಪಿ ನಿಯೋಗ ಭೇಟಿ ನೀಡಿ ಹೋಗಿತ್ತು. ಆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದ ಬಿಜೆಪಿ ನಾಯಕರು ನಾಗಮಂಗಲದ ಗಲಭೆಯನ್ನ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಗುಡುಗಿದ್ದರು.

ಶುಕ್ರವಾರ ನಾಗಮಂಗಲಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್‌ಡಿ‌ ಕುಮಾರಸ್ವಾಮಿ ಗಲಭೆಯಲ್ಲಿ ಹಾನಿಗೊಳಗಾಗಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ತಮ್ಮ ತಮ್ಮ ಅಂಗಡಿ ಮುಂಗ್ಗಟ್ಟುಗಳನ್ನು ಕಳೆದುಕೊಂಡಿದ್ದ ಜನರು ಕುಮಾರಸ್ವಾಮಿ ಬಳಿ ತಮ್ಮ ನೋವನ್ನು ತೊಡಿಕೊಂಡರು. ನಾಗಮಂಗಲದ ಕೋಮು ದಳ್ಳುರಿಯನ್ನು ಕಣ್ಣಾರೆ ಕಂಡ ಕುಮಾರಸ್ವಾಮಿ ಇಡೀ ಗಲಭೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮ ಎಂದು ನೇರವಾಗಿ ಆರೋಪ ಮಾಡಿದರು. 1990 ರಲ್ಲಿ ವೀರೇಂದ್ರ ಪಾಟೀಲರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಗಲಭೆ ನಡೆಸಿದಂತೆ ಸಿದ್ದರಾಮಯ್ಯರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷವೇ ನಡೆಸಿರೊ ಷಡ್ಯಂತ್ರ ಇದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವ ತನಿಖೆಯನ್ನಾದರು ಮಾಡಲಿ ಎಂದು ಗುಡುಗಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago