ಹೊಸದಿಲ್ಲಿ: ಮಹಾರಾಷ್ಟ್ರ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯ ಪ್ರಬಲ ವಿರೋಧಿಗಳಲ್ಲಿ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಒಂದು. ಆದರೆ ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಹಾಗೂ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಎನ್‌ಸಿಪಿ ತನ್ನ ಬೆಂಬಲ ಪ್ರಕಟಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದರೊಂದಿಗೆ ಈಶಾನ್ಯದ ರಾಜ್ಯವು ಮತ್ತೊಮ್ಮೆ ವಿರೋಧ ಪಕ್ಷವಿಲ್ಲದ ಸರ್ಕಾರ ಕಾಣುತ್ತಿದೆ.
ಇತ್ತೀಚೆಗೆ ನಡೆದ ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿರಲಿಲ್ಲ. ಎನ್‌ಡಿಪಿಪಿ 25, ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಕಂಡಿದ್ದವು. ಹೀಗೆ ಮೈತ್ರಿ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿತ್ತು. ಮಂಗಳವಾರ ನಡೆದ ಸಮಾರಂಭದಲ್ಲಿ ನೀಫಿಯು ರಿಯೊ ಅವರು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜತೆಗೆ ಎನ್‌ಡಿಪಿಪಿಯ ಏಳು ಹಾಗೂ ಬಿಜೆಪಿಯ ಐವರು ಶಾಸಕರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗಿದ್ದರು.
“ನಾಗಾಲ್ಯಾಂಡ್‌ನ ಎನ್‌ಸಿಪಿ ಸ್ಥಳೀಯ ಘಟಕ ಹಾಗೂ ಹೊಸದಾಗಿ ಚುನಾಯಿತರಾದ ಶಾಸಕರು, ನಾಗಾಲ್ಯಾಂಡ್ ರಾಜ್ಯದ ಹಿತಾಸಕ್ತಿ ಮತ್ತು ಎನ್‌ಡಿಪಿಪಿ ಮುಖ್ಯಸ್ಥ ಹಾಗೂ ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಅವರ ಜತೆಗಿನ ನಮ್ಮ ಉತ್ತಮ ಸಂಬಂಧದ ಸಲುವಾಗಿ, ಅವರ ನೇತೃತ್ವದ ಸರ್ಕಾರದ ಭಾಗವಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಾಗಾಲ್ಯಾಂಡ್ ಸರ್ಕಾರದ ಭಾಗವಾಗಬೇಕೇ ಅಥವಾ ಬೇಡವೇ ಎನ್ನುವುದು ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ತೀರ್ಮಾನಕ್ಕೆ ಬಿಟ್ಟ ವಿಷಯವಾಗಿತ್ತು. ಈಶಾನ್ಯ ರಾಜ್ಯ ಉಸ್ತುವಾರಿಯ ಮಾಹಿತಿಯನ್ನು ಆಲಿಸಿದ ಬಳಿಕ ಮಂಗಳವಾರ ಬೆಳಿಗ್ಗೆ ಅವರು ಈ ಬೇಡಿಕೆಯನ್ನು ಒಪ್ಪಿಕೊಂಡಿದ್ದಾರೆ” ಎಂದು ವರ್ಮಾ ತಿಳಿಸಿದ್ದಾರೆ
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…