Featured

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ

ಮಂಗಳೂರು: ನಾಗುರಿಯಲ್ಲಿ ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಪೆ ಕಾಮಗಾರಿಯ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯ ಹಿಂಭಾಗದಲ್ಲಿದ್ದ ಕಾಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ನಿರಂತರ ಮಳೆಯಿಂದ ಉಂಟಾದ ನೀರಿನ ಒತ್ತಡಕ್ಕೆ ಗೋಡೆ ಕುಸಿದಿರುವ ಸಾಧ್ಯತೆಯಿದ್ದು, ಗೋಡೆಯ ನಿರ್ಮಾಣದಲ್ಲಿ ಕಾಮಗಾರಿ ದೋಷವಿದೆಯೇ ಎಂಬ ಬಗ್ಗೆ ತೀವ್ರ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಘಟನೆಯ ನಿಖರ ಕಾರಣ ಪತ್ತೆಹಚ್ಚಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದ್ದು, ತಾಂತ್ರಿಕ ತಜ್ಞರ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಳಪೆ ಕಾಮಗಾರಿ ನಡೆದಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಲ್ಲದೆ, ಅನಧಿಕೃತವಾಗಿ ಗುಡ್ಡ ಅಗೆದು ಅಪಾಯಕ್ಕೆ ಕಾರಣರಾದವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದರು.

ತಾಂತ್ರಿಕ ವರದಿ ಕೈ ಸೇರಿದ ತಕ್ಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದರು.

Vishwa News 24

Recent Posts

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

8 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

21 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago