Featured

ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ಕ್ರಮ : ಯಶ್ ಪಾಲ್ ಸುವರ್ಣ -Vishwanews24

ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ಕ್ರಮ : ಯಶ್ ಪಾಲ್ ಸುವರ್ಣ

ನಾಡ ದೋಣಿ ಮೀನುಗಾರಿಕೆ ಬಳಕೆಯ ಸೀಮೆ ಎಣ್ಣೆ ಅಸಮರ್ಪಕ ವಿತರಣೆಯಿಂದ ನಾಡ ದೋಣಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಿ ನಿರಂತರ ಸೀಮೆ ಎಣ್ಣೆ ಪೂರೈಕೆಗೆ ಸರಕಾರ ಕ್ರಮ ಕೈಗೊಂಡಿರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರಕಾರ ನಾಡದೋಣಿ ಮೀನುಗಾರಿಕೆ ಸೀಮೆ ಎಣ್ಣೆ ವಿತರಣೆಗೆ ಅನುದಾನ ಮಂಜೂರು ಮಾಡಿದೆ. ಇಂಧನ ಕಂಪೆನಿಗಳಲ್ಲಿ ನಿಗದಿತ ಪ್ರಮಾಣದಲ್ಲಿ
ಸೀಮೆ ಎಣ್ಣೆ ದಾಸ್ತಾನು ಕೊರತೆ ಉಂಟಾದ ಪರಿಣಾಮ ಸೀಮೆ ಎಣ್ಣೆ ವಿತರಣೆಯಲ್ಲಿ ವ್ಯತ್ಯಾಸ ಉಂಟಾಗಿದೆ.
ನಾಡ ದೋಣಿ ಮೀನುಗಾರರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರಕಾರ ಶನಿವಾರದಿಂದಲೇ ಕೈಗಾರಿಕಾ ಬಳಕೆಯ ಸೀಮೆ ಎಣ್ಣೆಯನ್ನು ಅವಶ್ಯಕತೆ ಇದ್ದಲ್ಲಿ ನಾಡ ದೋಣಿ ಮೀನುಗಾರರಿಗೆ ಮೀಸಲಿರಿಸುವ ಬಗ್ಗೆ ಪ್ರಕ್ರಿಯೆಗೆ ಮುಂದಾಗಿದೆ.
ಈಗಾಗಲೇ ಮೀನುಗಾರಿಕೆ ಬಳಕೆಯ ಸೀಮೆ ಎಣ್ಣೆ ಆಹಾರ ಸರಬರಾಜು ಇಲಾಖೆಯ ಮೂಲಕ ವಿತರಣೆಯಾಗುತ್ತಿದ್ದು ಕೆಲವು ತಾಂತ್ರಿಕ ಸಮಸ್ಯೆಗಳಿಂದ ಸಮರ್ಪಕ ರೀತಿಯಲ್ಲಿ ವಿತರಣೆ ನಡೆಯುತ್ತಿಲ್ಲ. ಈಗಾಗಲೇ ರಾಜ್ಯ ಸರಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದ್ದು ಶೀಘ್ರದಲ್ಲಿಯೇ ನಾಡ ದೋಣಿ ಮೀನುಗಾರಿಕೆಗೆ ಸೀಮೆ ಎಣ್ಣೆಯನ್ನು ಮೀನುಗಾರಿಕೆ ಇಲಾಖೆಯ ಮೂಲಕ ವಿತರಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಲಿದೆ.
ನಾಡ ದೋಣಿ ಮೀನುಗಾರರ ಸೀಮೆ ಎಣ್ಣೆ ಸಮರ್ಪಕ ವಿತರಣೆಗೆ ವಿಶೇಷ ಮುತುವರ್ಜಿ ವಹಿಸಿದ ಮುಖ್ಯ ಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಸಚಿವರಾದ ಶ್ರೀ ಎಸ್. ಅಂಗಾರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಸಂಸದರಾದ ಶ್ರೀ ಬಿ ವೈ ರಾಘವೇಂದ್ರ, ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ನಾಡ ದೋಣಿ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

18 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

18 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

19 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

19 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

19 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

19 hours ago