ಬೆಂಗಳೂರು: ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
ದೇಶಕ್ಕೊಂದೇ ಧ್ವಜ ಅದು ತ್ರಿವರ್ಣ ಧ್ವಜ. ಕನ್ನಡದ ಧ್ವಜವು ನಾಡಿನ ಸಾಂಸ್ಕೃತಿಕ ಧ್ವಜ. ಆದ್ದರಿಂದ ರಾಷ್ಟ್ರ ಧ್ವಜಕ್ಕೆ ಪರ್ಯಾಯ ಧ್ವಜ ಹೊಂದಲು ಸಾಧ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದರು.
ಈ ಹೇಳಿಕೆಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ. ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು ಎಂದು ಟೀಕಿಸಿದ್ದಾರೆ.
ನಾಡಗೀತೆ ಒಪ್ಪಿಕೊಂಡಿರುವ ನಾವು, ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹೊಂದಲು ಇರುವ ಸಮಸ್ಯೆ ಏನು. ನಾವು ನಮಗೊಂದು ನಾಡಗೀತೆಯನ್ನು ಒಪ್ಪಿಕೊಂಡಿಲ್ಲವೇ..? ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ..? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ. ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…