Featured

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್‌ 27 ರಂದು ಅದ್ದೂರಿಯಿಂದ ಆಚರಿಸಲು ನಿರ್ಧರಿಸಲಾಗಿದೆ : ಜಿ. ಪರಮೇಶ್ವರ್ -Vishwanews24

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಈ ಬಾರಿ ಜೂನ್‌ 27 ರಂದು ಅದ್ದೂರಿಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಡಿ.ಕೆ. ಶಿವಕುಮಾರ ಅವರು ದೆಹಲಿಯಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮ ಇದ್ದರಿಂದ ಸಭೆಯನ್ನು ನಾನೆ ನಡೆಸಿದ್ದೇನೆ. ಕಳೆದ ವರ್ಷ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಗಿತ್ತು. ಈ ಬಾರಿಯೂ ಸರಕಾರದ ವತಿಯಿಂದ ಜೂ.27 ರಂದು ಆಚರಿಸಲಾಗುತ್ತದೆ. ಬ್ಯಾಂಕೆಟ್‌ ಸಭಾಂಗಣ ಅಥವಾ ಯಾವ ಸ್ಥಳದಲ್ಲಿ ಆಚರಣೆ ಮಾಡಬೇಕು ಎಂಬುದರ ಬಗ್ಗೆ ಅಭಿಪ್ರಾಯ ಕೇಳಿ ಬಂದಿದೆ.

ಈ ಬಗ್ಗೆ ಸಿಎಂ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಕೆಂಪೇಗೌಡರ ಜಯಂತಿಯನ್ನು ಎಲ್ಲಾ ಜಿಲ್ಲೆಗಳಲ್ಲೂ ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ. ಅದಲ್ಲದೆ, ಎಲ್ಲಾ ಕಚೇರಿಯಲ್ಲೂ ಕೆಂಪೇಗೌಡರ ಭಾವಚಿತ್ರ, ರೈಲ್ವೇ ನಿಲ್ದಾಣ, ಬಸ್‌ ನಿಲ್ದಾಣ, ಪ್ರಮುಖ ಸ್ಥಳಗಳಲ್ಲಿ ಅವರ ಪ್ರತಿಮೆ ಪ್ರತಿಷ್ಠಾಪನೆ ಮಾಡುವುದು, ಶಾಲೆಯಲ್ಲಿ ಅವರ ಕುರಿತು ಪಠ್ಯದಲ್ಲಿ ಅಳವಡಿಕೆ ಮಾಡುವ ಬಗ್ಗೆ ಸಂಘ ಸಂಸ್ಥೆಯಿಂದ ಅಭಿಪ್ರಾಯ ಕೇಳಿ ಬಂದಿದೆ. ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ಕೆಂಪೇಗೌಡರ ಹೆಸರಲ್ಲೂ ಪ್ರಶಸ್ತಿ ಕೊಡುವ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದರು.

ಕೆಂಪೇಗೌಡ ಜಯಂತಿಗೆ ನೋಂದಣಿ ಸಂಘ ಸಂಸ್ಥೆಗಳಿಗೆ ಇಲಾಖೆಯಿಂದ ಖುದ್ದು ಆಮಂತ್ರಣ ಪತ್ರ ನೀಡಬೇಕು. ಜಯಂತಿ ಸಂಬಂಧ ಇಲಾಖೆಯು ವೆಬ್‌ಸೈಟ್‌ನಲ್ಲಿ ಸೂಕ್ತ ರೀತಿ ಮಾಹಿತಿ ನೀಡುವಂತೆಯೂ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

6 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

6 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

7 hours ago