ನಾಡಿನ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ – VIshwanews24
ನಾಡಿನ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ: ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆ-ಮನಗಳಲ್ಲಿ ಸಂಭ್ರಮವೋ ಸಂಭ್ರಮ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯ ! pic.twitter.com/SEYqoPUsHl
— Narendra Modi (@narendramodi) March 22, 2023
ದೇಶದೆಲ್ಲೆಡೆ ಯುಗಾದಿ ಹಬ್ಬವನ್ನು ಬೇರೆ ಬೇರೆ ಹೆಸರಿನಿಂದ ಆಚರಿಸಲಾಗುತ್ತದೆ. ಆಂಧ್ರಪ್ರದೇಶ (Andhra Pradesh) ಮತ್ತು ಕರ್ನಾಟಕದ (Karnataka) ಜನರು ಯುಗಾದಿಯನ್ನು ಹೊಸ ವರ್ಷವೆಂದು ಪರಿಗಣಿಸುತ್ತಾರೆ. ಈ ದಿನ ಬೇವು-ಬೆಲ್ಲವನ್ನು ಎಲ್ಲರಿಗೂ ಹಂಚಲಾಗುತ್ತದೆ. ಇದು ಜೀವನದಲ್ಲಿ ಒಳ್ಳೆಯದು ಮತ್ತು ಕೆಟ್ಟ ಹಂತವನ್ನು ಸಮಾನವಾಗಿ ಸ್ವೀಕರಿಸಬೇಕು ಎಂಬ ಸಂದೇಶವನ್ನು ಸಾರುತ್ತದೆ. ಅಲ್ಲದೇ ವಸಂತ ಋತುವನ್ನು ಸ್ವಾಗತಿಸುವ ದಿನವೂ ಇದಾಗಿದೆ.
ಉಡುಪಿ : ಲಿಂಗತ್ವ ಅಲ್ಪ ಸಂಖ್ಯಾತರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಜಿಲ್ಲಾಧಿಕಾರಿ – Vishwanews24
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು, ಸಿನಿ ತಾರೆಯರು ಜನತೆಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿ ಸಂದೇಶ ಹಂಚಿಕೊಂಡಿದ್ದಾರೆ.
