Featured

ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ; ದಸರಾ ಉದ್ಘಾಟನ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ – Vishwanews24

  • ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ..

  • ದಸರಾ ಉದ್ಘಾಟನ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ ..

  • ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ..

  • ರಾಜ್ಯದ ಬೇರೆಡೆ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಗೆ ಸೇರುವಂತಿಲ್ಲ..

ಮೈಸೂರು: ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೋವಿಡ್ ಕಾರಣದಿಂದ ಈ ಬಾರಿಯೂ ಸರಳ ದಸರಾ ಆಚರಣೆ ನಡೆಯುತ್ತಿದ್ದು, ಮೈಸೂರು ಹೊರತುಪಡಿಸಿ ರಾಜ್ಯದ ಬೇರೆಡೆ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಗೆ ಸೇರುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ.

ಮೈಸೂರು ಪ್ರತ್ಯೇಕ ಮತ್ತು ಮೈಸೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಿಗೆ ಅನ್ವಯವಾಗುವಂತೆ ಎರಡು ಮಾರ್ಗಸೂಚಿ ಪ್ರಕಟಿಸಲಾಗಿದೆ.

ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಕಡ್ಡಾಯ

ಅ.7ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ. ಪ್ರತಿದಿನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ.

ಅ.15ರಂದು ನಡೆಯುವ ಜಂಬೂ ಸವಾರಿ/ ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ.

ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ರಕ್ಷಣಾ ಸಿಬ್ಬಂದಿಗಳು ಅ.4ರ ನಂತರ ಮಾಡಿಸಿದಿ ಆರ್ ಟಿಪಿಸಿಆರ್ ವರದಿ ಮತ್ತು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು.

ಇತರೆಡೆ:

ರಾಜ್ಯದ ಇತರೆಡೆ ಆಚರಣೆಯ ಸಂದರ್ಭದಲ್ಲಿ 400ಕ್ಕಿಂತ ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರ ಕಡ್ಡಾಯ ಪಾಲಿಸಬೇಕು.

ಕೋವಿಡ್ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಕೋಟ : ಈ ಬಾರಿಯ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಕಟಪಾಡಿ ಆಯ್ಕೆ -Vishwanews24

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

5 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

5 hours ago